ರಾಜ್ಯ

ಆನೇಕಲ್: ಕೆಮಿಕಲ್ ಕಂಪನಿಯಲ್ಲಿ ಸಿಲಿಂಡರ್ ಸ್ಫೋಟ; 7 ಜನರಿಗೆ ಗಂಭೀರ ಗಾಯ

ತರಗುಪೇಟೆಯಲ್ಲಿ ನಿಗೂಢ ಸ್ಫೋಟವಾಗಿ ಇಬ್ಬರೂ ಮೃತಪಟ್ಟಿದ್ದು ಇದರ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ ಮತ್ತೊಂದು ಸ್ಫೋಟ ಪ್ರಕರಣ ಬೆಳಕಿಗೆ ಬಂದಿದೆ.

ಆನೇಕಲ್: ಕೆಮಿಕಲ್ ಕಂಪನಿಯಲ್ಲಿ ಸಿಲಿಂಡರ್ ಸ್ಫೋಟ; 7 ಜನರಿಗೆ ಗಂಭೀರ ಗಾಯ
ಸ್ಫೋಟದ ದೃಶ್ಯ
Published On :

ಬೆಂಗಳೂರು: ತರಗುಪೇಟೆಯಲ್ಲಿ ನಿಗೂಢ ಸ್ಫೋಟವಾಗಿ ಇಬ್ಬರೂ ಮೃತಪಟ್ಟಿದ್ದು ಇದರ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ ಮತ್ತೊಂದು ಸ್ಫೋಟ ಪ್ರಕರಣ ಬೆಳಕಿಗೆ ಬಂದಿದೆ.

ಆನೇಕಲ್ ನ ಅತ್ತಿಬೆಲೆ ಬಳಿಯ ಲೇಟ್ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟಗೊಂಡು ದುರ್ಘಟನೆ ಸಂಭವಿಸಿದೆ. ಬಾಯ್ಲರ್ ಸ್ಫೋಟದಿಂದ ಹೊಗೆ 3 ಕಿ.ಮೀ ವ್ಯಾಪಿಸಿದೆ. ಈಗಾಗಲೇ 7 ಮಂದಿಗೆ ಗಾಯಗೊಂಡಿದ್ದು, ಓರ್ವ ಸಾವಿನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಸುತ್ತಮುತ್ತಲಿನ ಪ್ರದೇಶದಲ್ಲಿರುವ ಜನರಲ್ಲಿ ಆತಂಕ ಎದುರಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವ ಕಾರ್ಯ ಮುಂದುವರೆಸಿದ್ದಾರೆ. ಆನೇಕಲ್ ಉಪವಿಭಾಗದ ಡಿವೈಎಸ್ಪಿ ಮಲ್ಲೇಶ್ ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಈ ಹಿಂದೆಯೂ ಕಂಪನಿಯಲ್ಲಿ ಬೆಂಕಿ ಅವಘಡ ಸಂಭವಿಸಿತ್ತು ಎನ್ನಲಾಗಿದೆ. ಗುರುವಾರ ನಗರದ ತರಗುಪೇಟೆಯಲ್ಲಿ ನಿಗೂಢ ಸ್ಫೋಟವಾಗಿ ಇಬ್ಬರೂ ಮೃತಪಟ್ಟಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.