ಬೆಂಗಳೂರು: ಹಾಡಹಗಲೇ ವ್ಯಕ್ತಿಯ ಬರ್ಬರ ಕೊಲೆ
ಹಾಡಹಗಲೇ ದುಷ್ಕರ್ಮಿಗಳು ವ್ಯಕ್ತಿ ಓರ್ವರನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ಹೊರವಲಯದ ಆವಲಹಳ್ಳಿ ಠಾಣಾ ವ್ಯಾಪ್ತಿಯ ಮಾರ್ಗೊಂಡನಹಳ್ಳಿಯಲ್ಲಿ ನಡೆದಿದೆ.

ಬೆಂಗಳೂರು: ಹಾಡಹಗಲೇ ದುಷ್ಕರ್ಮಿಗಳು ವ್ಯಕ್ತಿ ಓರ್ವರನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ಹೊರವಲಯದ ಆವಲಹಳ್ಳಿ ಠಾಣಾ ವ್ಯಾಪ್ತಿಯ ಮಾರ್ಗೊಂಡನಹಳ್ಳಿಯಲ್ಲಿ ನಡೆದಿದೆ. ಕೊಲೆಯಾದವರನ್ನು ರಾಮಮೂರ್ತಿನಗರದ ಬೋವಿ ಕಾಲೋನಿ ನಿವಾಸಿ ಕುಳ್ಳ ವೆಂಕಟೇಶ್ ಎಂದು ಗುರುತಿಸಲಾಗಿದೆ.
ಆಟೋದಲ್ಲಿ ಬಂದಿದ್ದ ದುಷ್ಕರ್ಮಿಗಳು ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಕುಳ್ಳ ವೆಂಕಟೇಶ್ ಅವರಿಗೆ ಮೊದಲು ಡಿಕ್ಕಿ ಹೊಡೆದಿದ್ದಾರೆ. ನಂತರ ಅವರು ಕೆಳಗೆ ಬೀಳುತ್ತಿದ್ದಂತೆ ಐವರು ದುಷ್ಕರ್ಮಿಗಳ ತಂಡ ಲಾಂಗು - ಮಚ್ಚುಗಳಿಂದ ಮಾರಕ ದಾಳಿ ನಡೆಸಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ವೆಂಕಟೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಜಮೀನು ವಿಚಾರಕ್ಕೆ ಸಂಬಂಧಿಸಿ ಕೊಲೆಯಾಗಿರಬಹುದುಎಂದು ಪೊಲೀಸರು ಶಂಕಿಸಿದ್ದಾರೆ. ಘಟನೆ ಸ್ಥಳಕ್ಕೆ ವೈಟ್ ಫೀಲ್ಡ್ ಡಿಸಿಪಿ ದೇವರಾಜ್, ಆವಲಹಳ್ಳಿ ಮತ್ತು ಕೆ.ಆರ್.ಪುರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


