ರಾಜ್ಯ

ಸೆ. 27ರ 'ಭಾರತ್ ಬಂದ್' ಕರೆಗೆ ರಾಜ್ಯ ಕಾಂಗ್ರೆಸ್ ಬೆಂಬಲ: ಬೆಂಗಳೂರಿನಲ್ಲಿ ಖಾಕಿ ಸರ್ಪಕಾವಲು

ದೇಶದ ಅನ್ನದಾತ ರೈತರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೋಮವಾರ (ಸೆ.27) ನಡೆಯುತ್ತಿರುವ 'ಭಾರತ್ ಬಂದ್' ಕರೆಗೆ ರಾಜ್ಯ ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಿದೆ. 'ರೈತರ ಹಕ್ಕೊತ್ತಾಯದ ಶಾಂತಿಯುತ ಬಂದ್ ಕರೆಗೆ ಪಕ್ಷದ ಬೆಂಬಲವಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೆ. 27ರ 'ಭಾರತ್ ಬಂದ್' ಕರೆಗೆ ರಾಜ್ಯ ಕಾಂಗ್ರೆಸ್ ಬೆಂಬಲ: ಬೆಂಗಳೂರಿನಲ್ಲಿ ಖಾಕಿ ಸರ್ಪಕಾವಲು
ಭಾರತ್ ಬಂದ್
Published On :

ಬೆಂಗಳೂರು: ದೇಶದ ಅನ್ನದಾತ ರೈತರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೋಮವಾರ (ಸೆ.27) ನಡೆಯುತ್ತಿರುವ 'ಭಾರತ್ ಬಂದ್' ಕರೆಗೆ ರಾಜ್ಯ ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಿದೆ. 'ರೈತರ ಹಕ್ಕೊತ್ತಾಯದ ಶಾಂತಿಯುತ ಬಂದ್ ಕರೆಗೆ  ಪಕ್ಷದ ಬೆಂಬಲವಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳ ರೈತ ವಿರೋಧಿ ಧೋರಣೆಯಿಂದಾಗಿ ದೇಶದ ಬಹುಸಂಖ್ಯಾತ ಅನ್ನದಾತ ಸಮುದಾಯ ತೀವ್ರ ವಿಷಮ ಪರಿಸ್ಥಿತಿ ಎದುರಿಸುತ್ತಿದೆ. ಕೆಲವೇ ಮಂದಿ ಉದ್ಯಮಿಗಳ ಬೆಂಬಲಕ್ಕೆ ನಿಂತಿರುವ ಬಿಜೆಪಿ ಇಡೀ ಶ್ರಮಿಕ ಜನಸಮುದಾಯವನ್ನು ವಂಚಿಸುತ್ತಿದೆ ಎಂದು ಟೀಕಿಸಿದ್ದಾರೆ.

ಪ್ರಧಾನಿ ಮೋದಿ ಸರ್ಕಾರದ ಕರಾಳ ಶಾಸನ, ನೀತಿ ಹಾಗೂ ಧೋರಣೆ ವಿರುದ್ಧ ರೈತರು ದಿಲ್ಲಿಯ ರಸ್ತೆಗಳಲ್ಲಿ ವರ್ಷಗಳಿಂದ ಹೋರಾಟ ನಡೆಸಿದ್ದಾರೆ. ರೈತರ ಹೋರಾಟವನ್ನು ಹತ್ತಿಕ್ಕುವ ನಿರಂತರ ಪ್ರಯತ್ನ ನಡೆಸಿದ ಬಿಜೆಪಿ ಸರ್ಕಾರಕ್ಕೆ, ಅವರ ನ್ಯಾಯಯುತ ಬೇಡಿಕೆಗಳನ್ನು ಕೇಳುವ ಕನಿಷ್ಟ ಸೌಜನ್ಯ ತೋರಿಲ್ಲ. ಇದು ಬಿಜೆಪಿಯ ಅಮಾನವೀಯ ಮನಃಸ್ಥಿತಿಗೆ ನಿದರ್ಶನ ಎಂದು ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.

ರೈತರ ಹಿತರಕ್ಷಣೆಗಾಗಿ ದಶಕದ ಹಿಂದೆಯೇ ಭೂಸ್ವಾಧೀನ ಕಾಯ್ದೆಯನ್ನು ಕಾಂಗ್ರೆಸ್ ನೇತ್ರತ್ವದ ಯುಪಿಎ ಸರ್ಕಾರ ಜಾರಿ ಮಾಡಿತ್ತು. ಆದರೆ, ಅದಕ್ಕೆ ವಿರುದ್ದವಾದ ದಿಕ್ಕಿನಲ್ಲಿ ಸಾಗಿದ ಮೋದಿ ಸರ್ಕಾರವು, ಕಳೆದ 7 ವರ್ಷಗಳಲ್ಲಿ ದೇಶದ ರೈತರ ಬದುಕನ್ನು ಅಸಹನೀಯಗೊಳಿಸಿದೆ. ಇದರ ವಿರುದ್ದ ರೈತರು ನಡೆಸುತ್ತಿರುವ ಹೋರಾಟವನ್ನು ಒಬ್ಬ ರೈತನ ಮಗನಾಗಿ  ಬೆಂಬಲಿಸುತ್ತೇನೆ. ನಮ್ಮ ಕಾಂಗ್ರೆಸ್ ಪಕ್ಷದ ನೈತಿಕ ಬೆಂಬಲವೂ ಇದೆ. ಹೋರಾಟ ಶಾಂತಿಯುತವಾಗಿರಲಿ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ

ಸೆ.27 ಭಾರತ್ ಬಂದ್‌ಗೆ ಕರೆ: ಸಿಲಿಕಾನ್ ಸಿಟಿಯಲ್ಲಿ ಖಾಕಿ ಕಾವಲು
ಬೆಂಗಳೂರು: ಕೇಂದ್ರ ಸರ್ಕಾರದ ಕೃಷಿ ಕಾಯ್ದೆ, ಬೆಲೆ ಏರಿಕೆ ವಿರೋಧಿಸಿ ರೈತಪರ ಸಂಘಟನೆಗಳು ಸೋಮವಾರ ಭಾರತ್ ಬಂದ್​ಗೆ ಕರೆ ನೀಡಿವೆ. ಹೀಗಾಗಿ ಈ ವೇಳೆ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ನಗರದೆಲ್ಲೆಡೆ  ಬಿಗಿ ಭದ್ರತೆ ಕಲ್ಪಿಸಿಲು ಖಾಕಿ ಸಿದ್ಧತೆಗೊಂಡಿದೆ. ನಗರದಲ್ಲಿ ವಿವಿಧ ಸಂಘಟನೆಗಳು ಬಂದ್​ಗೆ ಕರೆ ನೀಡಿವೆ. ಹೀಗಾಗಿ ಬೆಂಗಳೂರಿಗೆ ವಿವಿಧ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಆಗಮಿಸುವ  ನಿರೀಕ್ಷೆ ಇರುವುದರಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ  ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗುತ್ತಿದೆ. ಟೌನ್​ಹಾಲ್‌ನಿಂದ ಮೈಸೂರು ಬ್ಯಾಂಕ್​ವರೆಗೂ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನಾ ಸಭೆ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.