ರಾಜ್ಯ

ಆನೇಕಲ್: ಎರಡು ಕಾರುಗಳ ನಡುವೆ ಭೀಕರ ಅಪಘಾತ; ಇಬ್ಬರ ದುರ್ಮರಣ

ಕಾರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಮೃತಪಟ್ಟಿರುವ ಘಟನೆ ಕರ್ನಾಟಕದ ಗಡಿಯ ಹೊಸೂರು ಬಳಿ ಸಂಭವಿಸಿದೆ.

ಆನೇಕಲ್: ಎರಡು ಕಾರುಗಳ ನಡುವೆ ಭೀಕರ ಅಪಘಾತ; ಇಬ್ಬರ ದುರ್ಮರಣ
ಅಪಘಾತದ ದೃಶ್ಯ
Published On :

ಆನೇಕಲ್: ಕಾರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಮೃತಪಟ್ಟಿರುವ ಘಟನೆ ಕರ್ನಾಟಕದ ಗಡಿಯ ಹೊಸೂರು ಬಳಿ ಸಂಭವಿಸಿದೆ.

ಹೊಸೂರು ಸಮೀಪದ ಸೂಳಗಿರಿ ಎಚ್.ಪಿ  ಪೆಟ್ರೋಲ್ ಬಂಕ್ ಎದುರು ಭೀಕರ ಅಪಘಾತ ಸಂಭವಿಸಿದ್ದು, ಕಾರು ಚಾಲಕರು  ಸಾವನ್ನಪ್ಪಿದ್ದಾರೆ. ಬೆಂಗಳೂರಿನ ವೈಯಾಲಿಕಾವಲ್ ನಿವಾಸಿ 21 ವರ್ಷದ ಸುಮಂತ್ ಮತ್ತು ಕೋರಮಂಗಲ ನಿವಾಸಿ 34 ವರ್ಷದ ವಿನ್ಸೆಂಟ್ ಗೋಪಿ ಮೃತ ದುರ್ದೈವಿಗಳು.

ಇಂಡಿಕಾ ಕಾರಿಗೆ ರಾಂಗ್ ರೂಟ್ ನಲ್ಲಿ ಬಂದ ಸ್ಕೋಡಾ ಕಾರು ಡಿಕ್ಕಿ ಹೊಡೆದಿದೆ. ಮೃತದೇಹಗಳನ್ನು ಹೊಸೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಡಿಕ್ಕಿಯ ರಭಸಕ್ಕೆ ಸುಮಂತ್ ಎಂಬ ಕಾರು ಚಾಲಕ 30 ಅಡಿ ದೂರ ಹೋಗಿ ಬಿದ್ದಿದ್ದಾರೆ. 

ಅಪಘಾತ ಸ್ಥಳಕ್ಕೆ ಸೂಳಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.