ರಾಜ್ಯ

ಭಾರತ್ ಬಂದ್: ಬೆಂಗಳೂರು ನಗರ ವಿವಿ ಪರೀಕ್ಷೆ ಮುಂದೂಡಿಕೆ

ಭಾರತ್ ಬಂದ್ ಹಿನ್ನೆಲೆ, ಹಾಗೂ ಕೇಂದ್ರ ಕೃಷಿಸುಧಾರಣಾ ಕಾಯ್ದೆ ವಾಪಸ್ ಪಡೆಯುಂತೆ ಆಗ್ರಹಿಸಿ ಸಂಯುಕ್ತ ರೈತ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಬೆಂಗಳೂರು ನಗರ ವಿಶ್ವವಿದ್ಯಾಲಯದ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಭಾರತ್ ಬಂದ್: ಬೆಂಗಳೂರು ನಗರ ವಿವಿ ಪರೀಕ್ಷೆ ಮುಂದೂಡಿಕೆ
ಬೆಂಗಳೂರು ನಗರ ವಿವಿ
Published On :

ಬೆಂಗಳೂರು: ಭಾರತ್ ಬಂದ್ ಹಿನ್ನೆಲೆ, ಹಾಗೂ  ಕೇಂದ್ರ ಕೃಷಿಸುಧಾರಣಾ  ಕಾಯ್ದೆ ವಾಪಸ್ ಪಡೆಯುಂತೆ ಆಗ್ರಹಿಸಿ ಸಂಯುಕ್ತ ರೈತ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಬೆಂಗಳೂರು ನಗರ ವಿಶ್ವವಿದ್ಯಾಲಯದ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಮುಂದಿನ ಆದೇಶದವರೆಗೂ ಪರೀಕ್ಷೆ ಮುಂದೂಡಿರುವುದಾಗಿ ವಿಶ್ವವಿದ್ಯಾಲಯ ಆದೇಶ ಹೊರಡಿಸಿದೆ. ಬೆಂಗಳೂರು ನಗರ ವಿವಿ ಸ್ನಾತಕ (ಯುಜಿ). ಸ್ನಾತಕೋತ್ತರ (ಪಿ.ಜಿ) ಹಾಗೂ ಬಿಎಡ್ ಪದವಿ ಪರೀಕ್ಷೆಗಳು ನಡೆಯಬೇಕಾಗಿತ್ತು. 

ಆದರೆ, ಭಾರತ ಬಂದ್ ಕಾರಣ ಪರೀಕ್ಷೆಗೆ ಹಾಜರಾಗಲು ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಬೆಂಗಳೂರು ನಗರ ವಿವಿ ಕುಲಸಚಿವರಾದ (ಮೌಲ್ಯಮಾಪನ) ಪ್ರೊ. ರಮೇಶ್ ಬಿ. ಆದೇಶ ಹೊರಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.