ಹೊಸ ಸಂಶೋಧನೆ, ಅಭಿವೃದ್ಧಿ ನೀತಿ ರಚನೆ: ಮುಖ್ಯಮಂತ್ರಿ ಬೊಮ್ಮಾಯಿ
ಕೃಷಿ, ತೈಲ, ಕೈಗಾರಿಕೆ ಮತ್ತಿತರ ಎಲ್ಲಾ ರಂಗಗಳಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಅಗತ್ಯವಾಗಿದ್ದು, ಹೊಸ ಆರ್ ಆ್ಯಂಡ್ ಡಿ ನೀತಿ ರಚನೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹುಬ್ಬಳ್ಳಿ: ಕೃಷಿ, ತೈಲ, ಕೈಗಾರಿಕೆ ಮತ್ತಿತರ ಎಲ್ಲಾ ರಂಗಗಳಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಅಗತ್ಯವಾಗಿದ್ದು, ಹೊಸ ಆರ್ ಆ್ಯಂಡ್ ಡಿ ನೀತಿ ರಚನೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ರಾಜ್ಯದಲ್ಲಿ ಸಾರ್ವಜನಿಕ ಹಾಗೂ ಖಾಸಗಿ ವಲಯದ 180 ಆರ್ ಆ್ಯಂಡ್ ಡಿ ಕೇಂದ್ರಗಳಿವೆ. ಕೈಗಾರಿಕೆ, ಕೃಷಿ, ಆಹಾರ ರಂಗದಲ್ಲಿ ಆರ್ ಆ್ಯಂಡ್ ಡಿ ಬಳಕೆಗೆ ಹೆಚ್ಚು ಒತ್ತು ನೀಡಲು ಸರ್ಕಾರ ಉದ್ದೇಶಿಸಿದ್ದು, ಹೊಸ ನೀತಿ ರಚನೆಗೆ ಕಾರ್ಯಪಡೆ ಅಧ್ಯಕ್ಷರನ್ನಾಗಿ ಬಿವಿಬಿ ಇಂಜಿನಿಯರಿಂಗ್ ಕಾಲೇಜಿನ ಉಪಕುಲಪತಿ ಡಾ.ಅಶೋಕ ಶೆಟ್ಟರ್ ಅವರನ್ನು ನೇಮಿಸಲು ಚಿಂತನೆ ನಡೆದಿರುವುದಾಗಿ ತಿಳಿಸಿದರು.
ಬಿ.ವಿ.ಭೂಮರಡ್ಡಿ ಇಂಜಿನಿಯರಿಂಗ್ ಕಾಲೇಜಿನ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಬೊಮ್ಮಾಯಿ, ರಾಜಕೀಯವೂ ಒಂದು ವಿಜ್ಞಾನವೇ ಆಗಿದೆ. ಅಲ್ಲಿಯೂ ವೈಜ್ಞಾನಿಕ ವಿಧಾನಗಳಿವೆ. ತಾಂತ್ರಿಕ ಹಾಗೂ ವೈಜ್ಞಾನಿಕ ಸಂಶೋಧನೆಗಳನ್ನು ರಾಜತಾಂತ್ರಿಕವಾಗಿ ಬಳಸುವುದು ರಾಜಕೀಯ ವಿಜ್ಞಾನವಾಗಿದೆ. ಎಲ್ಲಾ ದೇಶಗಳು ಈ ನೀತಿ ಪಾಲಿಸಬೇಕು, ಕರ್ತವ್ಯವನ್ನು ನೈತಿಕತೆಯ ತಳಹದಿಯೊಂದಿಗೆ ಕಾಯಕದ ರೀತಿಯಲ್ಲಿ ನಿರ್ವಹಿಸಬೇಕು ಎಂದರು.
ದೇಶದ ಬಡತನ, ಆರೋಗ್ಯ, ಶಿಕ್ಷಣ, ಆರ್ಥಿಕ ಸವಾಲುಗಳನ್ನು ಅರಿಯಲು ನಾವು ಸದಾ ಕಾಲ ಜನರ ನಡುವೆ ಇರಬೇಕು, ಅದೇ ಜನರ, ಜನಪರ ರಾಜಕೀಯವಾಗಿದೆ. ಪ್ರಧಾನಮಂತ್ರಿಗಳು ಸಕ್ಕರೆ ಕಾರ್ಖಾನೆಗಳಲ್ಲಿ ಇಥೆನಾಲ್ ಉತ್ಪಾದನೆಗೆ ಶೇ. 20 ರಷ್ಟು ಅವಕಾಶ ನೀಡಿದ್ದಾರೆ. ಮುರುಗೇಶ್ ನಿರಾಣಿ ಅವರ ಇದರ ಸದುಪಯೋಗ ಪಡೆದವರಲ್ಲಿ ಮುಂಚೂಣಿಯಲ್ಲಿದ್ದಾರೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಬಿ.ವಿ ಬೊಮ್ಮರೆಡ್ಡಿ ಕಾಲೇಜ್ ಆಫ್ ಇಂಜಿನಿಯರಿಂಗ್ ನಿಂದ ಮೆಕಾನಿಕಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಪದವಿ ಪಡೆದಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ತಮ್ಮ ಹಳೆಯ ದಿನಗಳನ್ನು ಮೆಲುಕು ಹಾಕಿದರು. ತಮ್ಮ ಕಾಲೇಜಿನ ಸಂಪೂರ್ಣ ಸ್ವರೂಪವೇ ಬದಲಾಗಿದ್ದು, ಮತ್ತೊಮ್ಮೆ ವಿದ್ಯಾರ್ಥಿಯಾಗಿ ಪ್ರವೇಶ ಪಡೆಯಲು ಮನಸ್ಸಾಗುತ್ತಿದೆ ಎಂದು ಮನದಾಸೆಯನ್ನು ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


