ಬಿ.ಎಸ್.ಯಡಿಯೂರಪ್ಪ ಪ್ರವಾಸಕ್ಕೆ ಯಾವುದೇ ಅಡ್ಡಿ ಇಲ್ಲ: ಸಿಎಂ ಬೊಮ್ಮಾಯಿ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜ್ಯ ಪ್ರವಾಸಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಬೆಳಗಾವಿ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜ್ಯ ಪ್ರವಾಸಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಎಸ್.ಯಡಿಯೂರಪ್ಪ ರಾಜ್ಯ ಪ್ರವಾಸಕ್ಕೆ ಹೈಕಮಾಂಡ್ ಬ್ರೇಕ್ ಹಾಕಿದೆ ಎನ್ನಲಾದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಬಿಎಸ್.ಯಡಿಯೂರಪ್ಪ ರಾಜ್ಯ ಪ್ರವಾಸಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಹೇಳಿದ್ದಾರೆ. ಅದಕ್ಕಿಂತ ಹೆಚ್ಚು ಏನೂ ಹೇಳಿಲ್ಲ ಎಂದು ಹೇಳಿದ್ದಾರೆ.
ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಅ.1ರಂದು ಜಯಮೃತ್ಯುಂಜಯ ಸ್ವಾಮೀಜಿ ಪ್ರತಿಭಟನೆಗೆ ನಿರ್ಧರಿಸಿರುವುದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ನಾನು ಸ್ವಾಮೀಜಿ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ಹಿಂದುಳಿದ ವರ್ಗಗಳ ಆಯೋಗ ವರದಿ ಬಂದ ಮೇಲೆ ಕ್ರಮವಹಿಸುತ್ತೇನೆ. ಅದರ ಪ್ರಗತಿ ಬಗ್ಗೆ ತಿಳಿದುಕೊಂಡು ಮಾತನಾಡುತ್ತೇನೆ. ಶ್ರೀಗಳ ಜೊತೆಗೆ ಫೋನ್ ನಲ್ಲಿ ಮಾತನಾಡುತ್ತೇನೆ. ಸಮಸ್ಯೆಗಳನ್ನು ಎಲ್ಲರು ಸೇರಿ ಬಗೆಹರಿಸಬೇಕಿದೆ. ಕಿತ್ತೂರು ಕರ್ನಾಟಕ ಘೋಷಣೆ ಬಗ್ಗೆ ಮುಂದಿನ ದಿನಗಳಲ್ಲಿ ಚಿಂತನೆ ಮಾಡುವುದಾಗಿ ತಿಳಿಸಿದರು.
ರಾಜ್ಯದ ಎಲ್ಲಾ ಕಡೆ ಮಕ್ಕಳಲ್ಲಿ ಜ್ವರ ಕಾಣಿಸುತ್ತಿದೆ. ಮಕ್ಕಳಿಗೆ ಜ್ವರ ಇರುವುದರಿಂದ ಜಿಲ್ಲಾಸ್ಪತ್ರೆಗಳಲ್ಲಿ ತಪಾಸಣೆ ಮಾಡಲು ಸೂಚಿಸಲಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ತಪಾಸಣೆ ಹಾಗೂ ಆರೋಗ್ಯ ಶಿಬಿರ ಆಯೋಜನೆ ನಿರ್ದೇಶನ ನೀಡಲಾಗಿದೆ ಎಂದಿದ್ದಾರೆ.
ಕಾರ್ಯಕ್ರಮದಲ್ಲಿ ಜಾರಕಿಹೊಳಿ ಗೈರು ಹಾಜರಾಗಿರುವ ಕುರಿತು ಪ್ರತಿಕ್ರಿಯೆ ನೀಡಿ, ಜಾರಕಿಹೊಳಿ ಸಹೋದರರು ನನ್ನಿಂದ ಅಂತರ ಕಾಯ್ದುಕೊಳ್ಳುತ್ತಿರುವುದು ಸಮಸ್ಯೆ ಅಲ್ಲ. ಕಾರ್ಯಕ್ರಮಕ್ಕೆ ಬರುವುದಿಲ್ಲ ಎಂದು ಈಗಾಗಲೇ ತಿಳಿಸಿದ್ದಾರೆ. ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ ಬಾಲಚಂದ್ರ ಜಾರಕಿಹೊಳಿ ಬರೆದಿದ್ದಾರೆ.
ಇದೇ ವೇಳೆ ಗಡಿ ಸಂರಕ್ಷಣಾ ಆಯೋಗವನ್ನು ಶಕ್ತಿಶಾಲಿ ಮಾಡುತ್ತೇವೆ. ಬೊಮ್ಮಾಯಿ ಸರ್ಕಾರ ಟೇಕ್ ಆಫ್ ಆಗಿಲ್ಲ ಎಂಬ ಕಾಂಗ್ರೆಸ್ ಆರೋಪಕ್ಕೆ ತಿರುಗೇಟು ನೀಡಿದ ಅವರು, ಎಲ್ಲರೂ ಟೇಕ್ ಆಫ್ ಆಗಿದೆ ಎಂದು ಹೇಳುತ್ತಿದ್ದಾರೆ. ಜನಸಾಮಾನ್ಯರ ಧ್ವನಿ ತುಂಬಾ ಮುಖ್ಯ. ಜನ ಸ್ಪಂದಿಸದಿದ್ದರಿಂದ ಜನರಲ್ಲಿ ವಿಶ್ವಾಸ ಮೂಡಿದೆ. ಸರ್ಕಾರ ಟೇಕ್ ಆಫ್ ಆಗಿ ಬಹಳ ದಿನ ಆಗಿದೆ ಎಂದು ತಿರುಗೇಟು ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


