ಚಿಕ್ಕಬಳ್ಳಾಪುರ: ತಪ್ಪಿಸಿಕೊಳ್ಳುವ ಭರದಲ್ಲಿ ಗ್ರಾಮಸ್ಥರ ಮೇಲೆ ಬೈಕ್ ಕಳ್ಳರಿಂದ ಗುಂಡಿನ ದಾಳಿ
ವಾಹನಗಳನ್ನು ಕದ್ದು ಪರಾರಿಯಾಗುವ ಭರದಲ್ಲಿ ಬೈಕ್ ಕಳ್ಳರಿಬ್ಬರು ಗ್ರಾಮಸ್ಥರ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ: ವಾಹನಗಳನ್ನು ಕದ್ದು ಪರಾರಿಯಾಗುವ ಭರದಲ್ಲಿ ಬೈಕ್ ಕಳ್ಳರಿಬ್ಬರು ಗ್ರಾಮಸ್ಥರ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರದ ಪೆರೇಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯ ಮರವೇನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಇಬ್ಬರು ಕಳ್ಳರು ಗ್ರಾಮದಲ್ಲಿ ಬೈಕ್ ಕಳ್ಳತನಕ್ಕೆ ಯತ್ನಿಸಿದ್ದಾರೆ. ಈ ವೇಳೆ ಅವರನ್ನು ಹಿಡಿಯಲು ಗ್ರಾಮಸ್ಥರು ಮುಂದಾಗಿದ್ದು, ಆಗ ಕಳ್ಳರು ಗ್ರಾಮಸ್ಥರ ಮೇಲೆ ಗುಂಡು ಹಾರಿಸಿ ಪರಾರಿ ಆಗಿದ್ದಾರೆ.
ಈ ಗುಂಡಿನ ದಾಳಿಯಲ್ಲಿ ಗ್ರಾಮಸ್ಥ ಗಂಗಾಧರ್ ಅವರ ಹೊಟ್ಟೆಗೆ ಗುಂಡು ತಗುಲಿದ್ದು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಪ್ರಣಾಪಾಯದಿಂದ ಪಾರಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ.
ಇಬ್ಬರು ಕಳ್ಳರು ಬೈಕ್ ಕದ್ದು ಪರಾರಿಯಾಗುವಾಗ ಬೈಕ್ ಮಾಲೀಕ ಅದನ್ನು ಗಮನಿಸಿ ಕೂಡಲೇ ಅವರನ್ನು ತಡೆಯಲು ಮುಂದಾಗಿದ್ದಾರೆ. ಅಲ್ಲದೆ ಸ್ಥಳೀಯರಿಗೆ ಮಾಹಿತಿ ನೀಡಿ ಎಲ್ಲರೂ ಅವರನ್ನು ಹಿಡಿಯುವ ಪ್ರಯತ್ನ ಮಾಡಿದ್ದಾರೆ. ಈ ವೇಳೆ ಸಿಕ್ಕಿ ಬೀಳುವ ಭಯದಲ್ಲಿ ಕಳ್ಳರು ಗ್ರಾಮಸ್ಥರ ಮೇಲೆ ಗುಂಡು ಹಾರಿಸಿದ್ದಾರೆ. ಈ ವೇಳೆ ಬೈಕ್ ಕಳ್ಳರು ಪರಾರಿಯಾಗಿದ್ದಾರೆ. ಪ್ರಸ್ತುತ ಬೈಕ್ ಕಳ್ಳರ ಬಂಧನಕ್ಕೆ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದ್ದು, ಜಿಲ್ಲೆಯಾದ್ಯಂತ ಇರುವ ಚೆಕ್ ಪೋಸ್ಟ್ ಗಳಲ್ಲಿ ಅಲರ್ಟ್ ಘೋಷಣೆ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


