ರಾಜ್ಯ

ಬೆಂಗಳೂರು ಅಂತರರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿದೇಶಿ ಚಿತ್ರತಂಡಗಳನ್ನು ಆಹ್ವಾನಿಸಲು ಮುಖ್ಯಮಂತ್ರಿ ಸಲಹೆ

ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ವಿದೇಶಿ ಚಿತ್ರಗಳ ಪ್ರದರ್ಶನದೊಂದಿಗೆ, ಆ ಚಿತ್ರತಂಡದವರನ್ನೂ ಆಹ್ವಾನಿಸುವ ಮೂಲಕ ಚಿತ್ರೋತ್ಸವವನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಜನಪ್ರಿಯಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಲಹೆ ನೀಡಿದರು.

ಬೆಂಗಳೂರು ಅಂತರರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿದೇಶಿ ಚಿತ್ರತಂಡಗಳನ್ನು ಆಹ್ವಾನಿಸಲು ಮುಖ್ಯಮಂತ್ರಿ ಸಲಹೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸುನಿಲ್ ಪುರಾಣಿಕ್
Published On :

ಬೆಂಗಳೂರು: ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ವಿದೇಶಿ ಚಿತ್ರಗಳ ಪ್ರದರ್ಶನದೊಂದಿಗೆ, ಆ ಚಿತ್ರತಂಡದವರನ್ನೂ ಆಹ್ವಾನಿಸುವ ಮೂಲಕ ಚಿತ್ರೋತ್ಸವವನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಜನಪ್ರಿಯಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಲಹೆ ನೀಡಿದರು.

ಅವರು ಇಂದು ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರು ಹಾಗೂ ಅಧಿಕಾರಿಗಳೊಂದಿಗೆ ಅಕಾಡೆಮಿಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಕನ್ನಡ ಚಿತ್ರರಂಗ ಬೆಳೆದು ಬಂದ ಬಗ್ಗೆ ಒಂದು ಕಿರುಚಿತ್ರ ನಿರ್ಮಿಸಿ, ಚಿತ್ರೋತ್ಸವದಲ್ಲಿ ಪ್ರದರ್ಶಿಸಿ, ನಮ್ಮ ಚಿತ್ರರಂಗದ ಸಾಧನೆಯನ್ನು ಜಗತ್ತಿನ ಮುಂದಿಡಬೇಕು ಎಂದು ಅವರು ತಿಳಿಸಿದರು.

ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಮಾನ್ಯತೆ ದೊರಕಿಸುವ ನಿಟ್ಟಿನಲ್ಲಿ ಇದರಿಂದ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು

ಸಭೆಯಲ್ಲಿ ಅಕಾಡೆಮಿ ಅಧ್ಯಕ್ಷ ಸುನಿಲ್ ಪುರಾಣಿಕ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ವಾರ್ತಾ ಇಲಾಖೆ ಆಯುಕ್ತ ಜಿ. ಜಗದೀಶ್ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.