ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಹಳಿ ತಪ್ಪಿದ ಎರಡು ಬೋಗಿಗಳು: ರಕ್ಷಣಾ ಕಾರ್ಯಾಚರಣೆ ಅಣಕು ಪ್ರದರ್ಶನ
ಯಶವಂತಪುರ ರೈಲ್ವೆ ನಿಲ್ದಾಣದಲ್ಲಿಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯಿಂದ ರೈಲು ಹಳ್ಳಿ ತಪ್ಪಿದಾಗ ಕೈಗೊಳ್ಳಬೇಕಾದ ರಕ್ಷಣಾ ಕಾರ್ಯಾಚರಣೆ ಕುರಿತಂತೆ ಅಣಕು ಪ್ರದರ್ಶನ ನಡೆಸಲಾಯಿತು.

ಬೆಂಗಳೂರು: ಯಶವಂತಪುರ ರೈಲ್ವೆ ನಿಲ್ದಾಣದಲ್ಲಿಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯಿಂದ ರೈಲು ಹಳ್ಳಿ ತಪ್ಪಿದಾಗ ಕೈಗೊಳ್ಳಬೇಕಾದ ರಕ್ಷಣಾ ಕಾರ್ಯಾಚರಣೆ ಕುರಿತಂತೆ ಅಣಕು ಪ್ರದರ್ಶನ ನಡೆಸಲಾಯಿತು.
ಎರಡು ಬೋಗಿಗಳು ಹಳಿ ತಪ್ಪಿದಾಗ ರೈಲ್ವೆ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಜಂಟಿಯಾಗಿ ಕಾರ್ಯಾಚರಣೆ ಕೈಗೊಂಡು ಗಾಯಾಳುಗಳನ್ನು ರಕ್ಷಿಸಿದರು. ಏಣಿಗಳನ್ನು ಹಾಕಿ ಕಿಟಕಿ ಮೂಲಕ ಬೋಗಿಯಲ್ಲಿದ್ದ ಗಾಯಾಳುಗಳನ್ನು ಹೊರಗೆ ತಂದರು. ತದನಂತರ ಸ್ಟ್ರೇಚರ್ ಮೂಲಕ ಕರೆದೊಯ್ದು ಚಿಕಿತ್ಸೆ ಒದಗಿಸಿದರು.
ಬೋಗಿಯೊಳಗಿದ್ದ ಕೆಲ ರೈಲ್ವೆ ಸಿಬ್ಬಂದಿ ಪ್ರಯಾಣಿಕರಂತೆ ನಟಿಸಿದರು. ಸುತ್ತಮುತ್ತಲಿನ ಕಟ್ಟಡ ಮೇಲಿಂದ ನೂರಾರು ಪ್ರೇಕ್ಷಕರು ಈ ಅಣಕು ಕಾರ್ಯಾಚರಣೆಯನ್ನು ವೀಕ್ಷಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


