ರಾಜ್ಯ

ವಿಮಾನಯಾನ ಮೂಲಸೌಕರ್ಯ ಕುರಿತು ಸಿಎಂ ಬೊಮ್ಮಾಯಿಗೆ ಕೇಂದ್ರ ಸಚಿವ ಸಿಂಧಿಯಾ ಪತ್ರ

ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರವು(ಎಎಐ) ವಿಮಾನ ನಿಲ್ದಾಣಗಳ ಅಭಿವೃದ್ಧಿ ಮತ್ತು ವಿಸ್ತರಣೆಯನ್ನು ಕೈಗೊಂಡಿದ್ದರಿಂದ, ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ರಾಜ್ಯದಲ್ಲಿ ವಿಮಾನಯಾನ...

ವಿಮಾನಯಾನ ಮೂಲಸೌಕರ್ಯ ಕುರಿತು ಸಿಎಂ ಬೊಮ್ಮಾಯಿಗೆ ಕೇಂದ್ರ ಸಚಿವ ಸಿಂಧಿಯಾ ಪತ್ರ
ಜ್ಯೋತಿರಾದಿತ್ಯ ಸಿಂಧಿಯಾ
Published On :

ಬೆಂಗಳೂರು: ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರವು(ಎಎಐ) ವಿಮಾನ ನಿಲ್ದಾಣಗಳ ಅಭಿವೃದ್ಧಿ ಮತ್ತು ವಿಸ್ತರಣೆಯನ್ನು ಕೈಗೊಂಡಿದ್ದರಿಂದ, ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ರಾಜ್ಯದಲ್ಲಿ ವಿಮಾನಯಾನ ಮೂಲಸೌಕರ್ಯವನ್ನು ಬಲಪಡಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

ಕರ್ನಾಟಕದಲ್ಲಿ ವಿಮಾನಯಾನ ಮೂಲಸೌಕರ್ಯವನ್ನು ಬಲಪಡಿಸುವ ಯೋಜನೆಗಳನ್ನು ತ್ವರಿತಗೊಳಿಸಲು ಸಹಕಾರ ನೀಡುವಂತೆ ಸಿಎಂ ಬೊಮ್ಮಾಯಿಗೆ ಕೇಂದ್ರ ಸಚಿವರು ವಿನಂತಿಸಿದ್ದಾರೆ. 

ಈ ಸಂಬಂಧ ನಾಗರಿಕ ವಿಮಾನಯಾನ ಸಚಿವಾಲಯವು ನೀಡಿದ ಪ್ರಕಟಣೆಯಲ್ಲಿ ಸಿಂಧಿಯಾ ಅವರು ಬೆಳಗಾವಿ, ಮೈಸೂರು, ಶಿವಮೊಗ್ಗ ಮತ್ತು ವಿಜಯಪುರದ ವಿಮಾನ ನಿಲ್ದಾಣ ಯೋಜನೆಗಳ ಬಗ್ಗೆ ಬೊಮ್ಮಾಯಿ ಅವರ ಗಮನ ಸೆಳೆದಿದ್ದಾರೆ.

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಎಎಐ 370 ಎಕರೆ ಭೂಮಿ ಅವಶ್ಯಕತೆ ಇದೆ ಎಂದು ಅಂದಾಜಿಸಿದ್ದು, ಅದರಲ್ಲಿ 348.6 ಎಕರೆಗಳನ್ನು ಹಸ್ತಾಂತರಿಸಲಾಗಿದೆ ಮತ್ತು ಮೈಸೂರಿನಲ್ಲಿ ಎಎಐ 240 ಎಕರೆಗಳನ್ನು ಮಂಜೂರು ಮಾಡಲು ವಿನಂತಿಸಿದೆ, ಆದರೆ ಅದನ್ನು ರಾಜ್ಯ ಸರ್ಕಾರ ಇನ್ನೂ ಹಸ್ತಾಂತರಿಸಿಲ್ಲ ಎಂದು ಉಲ್ಲೇಖಿಸಲಾಗಿದೆ.

ರಾಜ್ಯ ಸರ್ಕಾರದ ಭಾಗದಲ್ಲಿ 7.55 ಕೋಟಿ ಬಾಕಿ ಇದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.