ವಿಜಯಪುರ: ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದ ಬಂಧಿತ ಆರೋಪಿ ಜೈಲಿನಲ್ಲಿ ಆತ್ಮಹತ್ಯೆ
ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿಯೋರ್ವ ಜೈಲಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ವಿಜಯಪುರ: ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿಯೋರ್ವ ಜೈಲಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಬಂಧಿತ ಆರೋಪಿ 37 ವರ್ಷದ ದೇವಿಂದ್ರ ಸಂಗೋಗಿ ಸಿಂದಗಿ ಪೊಲೀಸ್ ಠಾಣೆಯಲ್ಲೇ ನೇಣಿಗೆ ಶರಣಾಗಿದ್ದಾನೆ.
ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ನಂತರ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್ ಡಿ ಆನಂದ್ ಕುಮಾರ್ ಸುದ್ದಿಗಾರರೊಂದಿಗೆ ಮಾತನಾಡಿ, ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ದೇವಿಂದ್ರ ಸಂಗೋಗಿಯನ್ನು ಸಿಂದಗಿ ಪೊಲೀಸ್ ಠಾಣೆ ಪೊಲೀಸರು ಶನಿವಾರ ತಡರಾತ್ರಿ ಬಂಧಿಸಿದ್ದರು. ಇಂದು ನಸುಕಿನ ಜಾವ ಶೌಚಾಲಯಕ್ಕೆ ತೆರಳಿದ್ದ ಆತ, ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿಸಿದರು.
ಆರೋಪಿ ನೇಣು ಬಿಗಿದುಕೊಂಡಿದ್ದನ್ನು ಗಮನಿಸಿದ ನಮ್ಮ ಸಿಬ್ಬಂದಿ ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೇ ಆರೋಪಿ ಮೃತಪಟ್ಟಿದ್ದಾನೆ ಎಂದರು.
ಇದೊಂದು ಲಾಕಪ್ ಡೆತ್ ಎನ್ನಬಹುದಾದರೂ ಪೊಲೀಸರ ಕಿರುಕುಳದಿಂದ ಆರೋಪಿ ಮೃತಪಟ್ಟಿಲ್ಲ. ನೇಣು ಹಾಕಿಕೊಂಡು ಮೃತಪಟ್ಟಿದ್ದಾನೆ. ಇಂಥ ಪ್ರಕರಣಗಳನ್ನು ಸಿಐಡಿ ತನಿಖೆಗೆ ವಹಿಸಲಾಗುತ್ತದೆ. ಈ ಘಟನೆ ಕುರಿತು ಸಿಐಡಿ ತನಿಖೆಗೆ ವಹಿಸುವಂತೆ ಮೇಲಧಿಕಾರಿಗಳಿಗೆ ವರದಿ ಸಲ್ಲಿಸಲಾಗುತ್ತದೆ ಎಂದರು.
ಮೃತನ ಪೋಷಕರು ಹಾಗೂ ಸಂಬಂಧಿಕರಿಂದ ಪೊಲೀಸ್ ಠಾಣೆ ಎದುರಿಗೆ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಇಂಥ ಘಟನೆಯಿಂದ ಸಹಜವಾಗಿ ಮನೆಯವರಿಗೆ ನೋವಾಗುತ್ತದೆ. ಆದರೆ, ಪೊಲೀಸ್ ಠಾಣೆ ಎದುರು ಪ್ರತಿಭಟನೆ ಮಾಡುವುದು ಸರಿಯಲ್ಲ ಎಂದರು. ಜಿಲ್ಲೆಯ ಸಿಂದಗಿ ತಾಲ್ಲೂಕಿನ ಗ್ರಾಮವೊಂದರಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಆರೋಪಿಸಿ ಆಕೆಯ ತಂದೆ ನೀಡಿದ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


