ರಾಜ್ಯ

ರಾಜ್ಯದಲ್ಲಿ ಇಂದು ಕೊರೋನಾದಿಂದ ನಾಲ್ವರು ಸಾವು, ಬೆಂಗಳೂರಿನಲ್ಲಿ 207 ಸೇರಿ 397 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 397 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,97,643ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು ಕೊರೋನಾದಿಂದ ನಾಲ್ವರು ಸಾವು, ಬೆಂಗಳೂರಿನಲ್ಲಿ 207 ಸೇರಿ 397 ಮಂದಿಗೆ ಪಾಸಿಟಿವ್
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 397 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,97,643ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ನಾಲ್ವರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 38224ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 207 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,57,242ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ ಕೊರೋನಾದಿಂದ ಒಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 277 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,52,378ಕ್ಕೆ ಏರಿಕೆಯಾಗಿದೆ. ಇನ್ನು 7012 ಸಕ್ರಿಯ ಪ್ರಕರಣಗಳಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.