ಮಂಗಳೂರು: ವೈದ್ಯ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು
ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿನಿ ಭಾನುವಾರ ಇಲ್ಲಿನ ಅಪಾರ್ಟ್ಮೆಂಟ್ ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸೋಮವಾರ ಪೊಲೀಸ್ ಮೂಲಗಳು ತಿಳಿಸಿವೆ.

ಮಂಗಳೂರು: ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿನಿ ಭಾನುವಾರ ಇಲ್ಲಿನ ಅಪಾರ್ಟ್ಮೆಂಟ್ ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸೋಮವಾರ ಪೊಲೀಸ್ ಮೂಲಗಳು ತಿಳಿಸಿವೆ.
ಮೃತರನ್ನು ಬೀದರ್ ಮೂಲದ ವೈಶಾಲಿ ಗಾಯಕವಾಡ(25) ಎಂದು ಗುರುತಿಸಲಾಗಿದೆ.
ಇಲ್ಲಿಗೆ ಸಮೀಪದ ಕುಥಾರ್ನಲ್ಲಿರುವ ಅಪಾರ್ಟ್ಮೆಂಟ್ನಲ್ಲಿ ಆಕೆ ತನ್ನ ಸ್ನೇಹಿತೆಯೊಂದಿಗೆ ವಾಸವಿದ್ದರು ಮತ್ತು ಇಬ್ಬರೂ ಪ್ರತ್ಯೇಕ ಕೊಠಡಿಗಳಲ್ಲಿ ತಂಗಿದ್ದರು.
ಸ್ನೇಹಿತೆ ಆಕೆಗೆ ದೂರವಾಣಿ ಕರೆ ಮಾಡಿದಾಗ ಯಾವುದೇ ಪ್ರತಿಕ್ರಿಯೆ ಬಾರದೇ ಇದ್ದಾಗ ಘಟನೆ ಬೆಳಕಿಗೆ ಬಂದಿದೆ.
ವೈಶಾಲಿ ತನ್ನ ಕೊಠಡಿಯಲ್ಲಿ ಸೀಲಿಂಗ್ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ
ವೈಯಕ್ತಿಕ ಸಮಸ್ಯೆಗಳೇ ಕಾರಣವಾಗಿರಬಹುದು ಎಂದು ಮೂಲಗಳು ತಿಳಿಸಿವೆ.
ಈ ಸಂಬಂಧ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


