ರಾಜ್ಯ

ಮೆಗಾ ಲೋಕ್ ಅದಾಲತ್: 3.37 ಲಕ್ಷ ಪ್ರಕರಣಗಳ ಇತ್ಯರ್ಥ; ಪ್ರತಿಷ್ಠೆ ಮರೆತು ಮತ್ತೆ ಒಂದಾದ 25 ಜೋಡಿಗಳು!

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ (ಕೆಎಸ್ಎಲ್ಎಸ್ಎ) ಇದೇ 18ರಂದು ಹಮ್ಮಿಕೊಂಡಿದ್ದ ವರ್ಷದ ಕೊನೆಯ ಲೋಕ ಅದಾಲತ್‌ನಲ್ಲಿ 3.37 ಲಕ್ಷ ಪ್ರಕರಣ ಇತ್ಯರ್ಥಪಡಿಸಲಾಗಿದೆ.

ಮೆಗಾ ಲೋಕ್ ಅದಾಲತ್: 3.37 ಲಕ್ಷ ಪ್ರಕರಣಗಳ ಇತ್ಯರ್ಥ; ಪ್ರತಿಷ್ಠೆ ಮರೆತು ಮತ್ತೆ ಒಂದಾದ 25 ಜೋಡಿಗಳು!
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ (ಕೆಎಸ್ಎಲ್ಎಸ್ಎ) ಇದೇ 18ರಂದು ಹಮ್ಮಿಕೊಂಡಿದ್ದ ವರ್ಷದ ಕೊನೆಯ ಲೋಕ ಅದಾಲತ್‌ನಲ್ಲಿ 3.37 ಲಕ್ಷ ಪ್ರಕರಣ ಇತ್ಯರ್ಥಪಡಿಸಲಾಗಿದೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ  ಕೆಎಸ್ಎಲ್ಎಸ್ಎ ಕಾರ್ಯನಿರ್ವಾಹಕ ಅಧ್ಯಕ್ಷರೂ ಅದ ಹೈಕೋರ್ಟ್‌ ನ್ಯಾಯಮೂರ್ತಿ ಬಿ.ವೀರಪ್ಪ,  3.37 ಲಕ್ಷ ಪ್ರಕರಣಗಳ ಇತ್ಯರ್ಥದಿಂದ, ರಾಜ್ಯದ ಬೊಕ್ಕಸಕ್ಕೆ ದಂಡದ ರೂಪದಲ್ಲಿ 79.72 ಕೋಟಿ ರೂ.ಆದಾಯ ಬಂದಿದೆ ಮತ್ತು ಆ ಪ್ರಕರಣಗಳ ವಿಚಾರಣೆ ವೇಳೆ ನ್ಯಾಯಾಧೀಶರು ಮತ್ತು ಸಿಬ್ಬಂದಿಯ ವೇತನಕ್ಕೆ ಪಾವತಿಸಬೇಕಾಗಿದ್ದ 132.60 ಕೋಟಿ ರೂ.ಉಳಿತಾಯವಾಗಿದೆ ಎಂದರು.

ರಾಜ್ಯಾದ್ಯಂತ ಇತ್ಯರ್ಥವಾದ ವೈವಾಹಿಕ ವಿವಾದಗಳಿಗೆ ಸಂಬಂಧಿಸಿದ 1,528 ಪ್ರಕರಣಗಳ ಪೈಕಿ 37 ಪ್ರಕರಣಗಳಲ್ಲಿ ದಂಪತಿಗಳು ಮತ್ತೆ ಒಂದಾಗಿದ್ದಾರೆ. ಮೈಸೂರು ಜಿಲ್ಲಾ ನ್ಯಾಯಾಲಯದಲ್ಲಿ ನಡೆದ ಅದಾಲತ್‍ನಲ್ಲಿ 142 ಕೌಟುಂಬಿಕ ಪ್ರಕರಣಗಳು ಇತ್ಯರ್ಥಗೊಂಡಿವೆ. ಅವರಲ್ಲಿ 25 ಜೋಡಿಗಳು ಒಟ್ಟಿಗೆ ವಾಸಿಸಲು ತೀರ್ಮಾನಿಸಿದ್ದಾರೆ. ಅದೇ ರೀತಿ ಗದಗದಲ್ಲಿ 8, ಧಾರವಾಡದಲ್ಲಿ 2 ಹಾಗೂ ಚಿತ್ರದುರ್ಗ ಮತ್ತು ಚಿಕ್ಕಬಳ್ಳಾಪುರದಲ್ಲಿ ತಲಾ ಒಂದು ಜೋಡಿಗಳು ಲೋಕ ಅದಾಲತ್‌ನಲ್ಲಿ ರಾಜಿ ಸಂಧಾನದ ನಂತರ ಮತ್ತೆ ಒಂದಾಗಿದ್ದಾರೆ.

ಧಾರವಾಡ ಜಿಲ್ಲೆಯಲ್ಲಿ 35 ವರ್ಷದಿಂದ ಬಾಕಿ ಉಳಿದಿದ್ದ ಆಸ್ತಿ ವ್ಯಾಜ್ಯ ಇತ್ಯರ್ಥಪಡಿಸಲಾಗಿದೆ. ಹೊಳೆನರಸೀಪುರದಲ್ಲಿ ಬಾಕಿ ಉಳಿದಿದ್ದ 22 ವರ್ಷಕ್ಕಿಂತ ಹೆಚ್ಚು ಮತ್ತು 17 ವರ್ಷ ಹಳೆಯ ಜೀವನಾಂಶ ಪ್ರಕರಣವನ್ನು ಇತ್ಯರ್ಥಗೊಳಿಸಲಾಯಿತು ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.