ರಾಜ್ಯ

ವಿಪಕ್ಷಗಳ ಗದ್ದಲದ ನಡುವೆ ಮತಾಂತರ ನಿಷೇಧ ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ

ತೀವ್ರ ಕುತೂಹಲ ಮತ್ತು ಭಾರಿ ಗದ್ದಲಕ್ಕೆ ಕಾರಣವಾಗಿದ್ದ ಮತಾಂತರ ನಿಷೇಧ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಂಗೀಕಾರ ದೊರೆತಿದೆ.

ವಿಪಕ್ಷಗಳ ಗದ್ದಲದ ನಡುವೆ ಮತಾಂತರ ನಿಷೇಧ ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ
ವಿಧಾನಸಭೆಯಲ್ಲಿ ಮತಾಂತರ ನಿಷೇಧ ಮಸೂದೆ ಅಂಗೀಕಾರ
Published On :

ಬೆಳಗಾವಿ: ತೀವ್ರ ಕುತೂಹಲ ಮತ್ತು ಭಾರಿ ಗದ್ದಲಕ್ಕೆ ಕಾರಣವಾಗಿದ್ದ ಮತಾಂತರ ನಿಷೇಧ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಂಗೀಕಾರ ದೊರೆತಿದೆ.

ವಿಧಾನಸಭೆಯಲ್ಲಿ ಮಂಗಳವಾರ ‘ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ರಕ್ಷಣಾ ವಿಧೇಯಕ-2021’ ಮಂಡನೆಯಾಗಿದೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ನ ತೀವ್ರ ವಿರೋಧದ ನಡುವೆಯೂ ಮತಾಂತರ ನಿಷೇಧ ಮಸೂದೆಗೆ ಬೆಳಗಾವಿ ಸುವರ್ಣಸೌಧದಲ್ಲಿ ಅಂಗೀಕಾರ ಸಿಕ್ಕಿದೆ. ಇಂದು ಸದನದಲ್ಲಿ ಸ್ಪೀಕರ್‌ ಕಾಗೇರಿ ಮಂತಾತರ ನಿಷೇಧ ಮಸೂದೆಯನ್ನು ದ್ವನಿ ಮತಕ್ಕೆ ಹಾಕಿದರು. ಈ ವೇಳೆ ವಿಧಾನಸಭಾ ಹೆಚ್ಚಿನ ಸದಸ್ಯರು ಮಸೂದೆ ಪರ ಮತ ಹಾಕಿದ್ದು, ಈಗ ಅಂಗೀಕಾರಗೊಂಡಿದೆ.

ಎರಡು ದಿನಗಳ ಹಿಂದೆಯಷ್ಟೇ ಗೃಹ ಸಚಿವ ಆರಗ ಜ್ಞಾನೇಂದ್ರ ಮಂತಾತರ ಕಾಯ್ದೆ ಮಂಡಿಸಿದರು. ಬಳಿಕ ಒಂದಿಡೀ ದಿನ ಕಾಯ್ದೆ ಪರ-ವಿರೋಧ ಚರ್ಚೆ ನಡೆಸಲಾಯ್ತು. ಈಗ ಕೊನೆಗೂ ಧ್ವನಿ ಮತಕ್ಕೆ ಹಾಕಿ ಸರ್ಕಾರ ಒಪ್ಪಿಗೆ ಪಡೆದುಕೊಂಡಿದೆ.

ಸದನ ಮುಂದೂಡಿಕೆ
ಇನ್ನು ಕಾಂಗ್ರೆಸ್ ಸದಸ್ಯರ ಭಾರಿ ಗದ್ದಲದ ನಡುವೆಯೇ ಸ್ಪೀಕರ್ ಕಾಗೇರಿ ಅವರು ವಿಧೇಯಕ ಅಂಗೀಕಾರ ಪಡೆದಿದೆ ಎಂದು ಸದನವನ್ನು 10 ನಿಮಿಷಗಳ ಕಾಲ ಮುಂದೂಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.