ನೈಟ್ ಕರ್ಫ್ಯೂ: ಸರ್ಕಾರದ ನಿರ್ಧಾರಕ್ಕೆ ಸಿಟಿ ರವಿ ಅಸಮಾಧಾನ
ಕೊರೋನಾ ರೂಪಾಂತರಿ ವೈರಸ್ ಓಮಿಕ್ರಾನ್ ಭೀತಿಯಿಂದಾಗಿ ರಾಜ್ಯದಲ್ಲಿ ಡಿ.28ರಿಂದ 10ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದ್ದು, ಸರ್ಕಾರ ದಿಢೀರ್ ನಿರ್ಧಾರಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ.ರವಿಯವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಕೊರೋನಾ ರೂಪಾಂತರಿ ವೈರಸ್ ಓಮಿಕ್ರಾನ್ ಭೀತಿಯಿಂದಾಗಿ ರಾಜ್ಯದಲ್ಲಿ ಡಿ.28 ರಿಂದ 10 ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದ್ದು, ಸರ್ಕಾರ ದಿಢೀರ್ ನಿರ್ಧಾರಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ.ರವಿಯವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ನೈಟ್ ಕರ್ಫ್ಯೂ ಆದೇಶದ ಬಗ್ಗೆ ವ್ಯಾಖ್ಯಾನಿಸಲಾಗಲ್ಲ. ಸರಿ, ತಪ್ಪು ಎಂದು ನಾನು ವ್ಯಾಖ್ಯಾನ ಮಾಡುವುದಕ್ಕೆ ಆಗಲ್ಲ. ಓಮಿಕ್ರಾನ್ಗೆ ಭಯಪಡಬೇಕಿಲ್ಲವೆಂದು ವಿಜ್ಞಾನಿಗಳೇ ಹೇಳಿದ್ದಾರೆ. ಮೂಗು ಇರುವವರಿಗೆ ನೆಗಡಿ ತಪ್ಪಿದ್ದಲ್ಲ. ನೆಗಡಿ ಬಂದರೆ ಆತಂಕ ಪಡಬೇಕಾದ ಅವಶ್ಯಕತೆ ಇಲ್ಲ. ರಾಜ್ಯ ಸರ್ಕಾರ ಜನರನ್ನ ಅನಗತ್ಯ ಭಯಕ್ಕೆ ಒಳಪಡಿಸಬಾರದು. ಸದ್ಯ ಜನಜೀವನ ಸಹಜ ಸ್ಥಿತಿಯಲ್ಲಿದೆ, ಆದರೆ ಎಚ್ಚರವಹಿಸಬೇಕು ಎಂದು ಹೇಳಿದರು.
ರಾಜ್ಯದಲ್ಲಿ ಮಂಗಳವಾರದಿಂದ ನೈಟ್ ಕರ್ಫ್ಯೂ ಜಾರಿಗೊಂಡಿದ್ದು, ಸುಮಾರು 10 ದಿನಗಳ ಕಾಲ ರಾತ್ರಿ ಹತ್ತು ಗಂಟೆಯಿಂದ ಬೆಳಿಗ್ಗೆ 5 ಗಂಟೆ ವರೆಗೆ ಕರ್ಫ್ಯೂ ಜಾರಿಯಲ್ಲಿರಲಿದೆ. ಸರ್ಕಾರದ ಈ ನಿರ್ಣಯ ಕುರಿತು ಇದೀಗ ರಾಜ್ಯದಲ್ಲಿ ಪರ-ವಿರೋಧದ ಚರ್ಚೆಗಳು ಆರಂಭಗೊಂಡಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


