ಲಕ್ಷ ಕಂಠಗಳ ಗಾಯನದಲ್ಲಿ ಮಿಂದೆದ್ದ ಸಂಚಾರಿ ಪೊಲೀಸರು: ಮಾತಾಡ್ ಮಾತಾಡ್ ಕನ್ನಡ ಅಭಿಯಾನಕ್ಕೆ ಸಾಥ್
ಜನರಿಗೆ ಮಾರ್ಗದರ್ಶಕರಾಗಿ ರಸ್ತೆ ಸಂಚಾರ ನಿಯಮಗಳ ಕುರಿತು ಜಾಗೃತಿ ಮೂಡಿಸುವ ಜೊತೆಗೆ ಕಾಲ ಕಾಲಕ್ಕೆ ಥರಹೇವಾರಿ ವಿಭಿನ್ನ ಯೋಜನೆಗಳ ಮೂಲಕ ಗಮನ ಸೆಳೆಯುವ ಬೆಂಗಳೂರು ನಗರ ಟ್ರಾಫಿಕ್ ಪೊಲೀಸರು ಮಾತಾಡ್ ಮಾತಾಡ್ ಕನ್ನಡ ಅಭಿಯಾನದಲ್ಲಿ ಕೈಜೋಡಿಸಿದರು.
ಬೆಂಗಳೂರು: ಲಕ್ಷ ಕಂಠಗಳ ಗಾಯನ ಕಾರ್ಯಕ್ರಮದಡಿ ಸರ್ಕಾರದ ವಿವಿಧ ಇಲಾಖೆಗಳ ಸಿಬ್ಬಂದಿ ವರ್ಗ ಏಕ ಕಾಲಕ್ಕೆ ರಾಜ್ಯಾದ್ಯಂತ ನಾಡ ಗೀತೆ, ಬಾರಿಸು ಕನ್ನಡ ಡಿಂಡಿಮವ, ಜೋಗದ ಸಿರಿ ಬೆಳಕಿನಲ್ಲಿ ಮತ್ತು ಹುಟ್ಟಿದರೆ ಕನ್ನಡ ನಾಡಲ್ ಹುಟ್ಟಬೇಕು ಹಾಡುಗಳನ್ನು ಹಾಡುವುದರ ಮೂಲಕ ಲಕ್ಷ ಕಂಠಗಳ ಗಾಯನ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದು ಈಗ ಇತಿಹಾಸ.
ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಮತ್ತು ಇಂಧನ, ಕನ್ನಡ ಸಂಸ್ಕೃತಿ ಇಲಾಖೆ ಸಚಿವರಾದ ವಿ. ಸುನಿಲ್ ಕುಮಾರ್ ನೇತೃತ್ವದಲ್ಲಿ ಮೂಡಿ ಬಂದ ಈ ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ಸಂಚಾರಿ ಪೊಲೀಸರೂ ವಿದ್ಯುಕ್ತವಾಗಿ ಪಾಲ್ಗೊಂಡು ಅಭಿಯಾನದ ಕಳೆ ಹೆಚ್ಚಿಸಿದ್ದಾರೆ. ಟ್ರಾಫಿಕ್ ವಿಭಾಗದ ಜಂಟಿ ಪೊಲೀಸ್ ಆಯುಕ್ತರಾದ ರವಿಕಾಂತೇ ಗೌಡ ಅವರ ಮುಂದಾಳತ್ವದಲ್ಲಿ, ಬೆಂಗಳೂರು ನಗರ ಸಂಚಾರಿ ಪೊಲೀಸರು ಕನ್ನಡ ಗೀತೆಗಳ ಲಕ್ಷ ಕಂಠ ಗಾಯನದಲ್ಲಿ ಪಾಲ್ಗೊಂಡರು.
ಜನರಿಗೆ ಮಾರ್ಗದರ್ಶಕರಾಗಿ ರಸ್ತೆ ಸಂಚಾರ ನಿಯಮಗಳ ಕುರಿತು ಜಾಗೃತಿ ಮೂಡಿಸುವ ಜೊತೆಗೆ ಕಾಲ ಕಾಲಕ್ಕೆ ಥರಹೇವಾರಿ ವಿಭಿನ್ನ ಯೋಜನೆಗಳ ಮೂಲಕ ಗಮನ ಸೆಳೆಯುವ ಬೆಂಗಳೂರು ನಗರ ಟ್ರಾಫಿಕ್ ಪೊಲೀಸರು ಮಾತಾಡ್ ಮಾತಾಡ್ ಕನ್ನಡ ಅಭಿಯಾನದಲ್ಲಿ ಕೈಜೋಡಿಸಿದ್ದಾರೆ.
ಉಚಿತ ಹೆಲ್ಮೆಟ್ ಹಂಚುವಿಕೆ, ಕೊರೊನಾ ಸಮಯದಲ್ಲಿ ಮಾಸ್ಕ್ ಧರಿಸುವಂತೆ ಸವಾರರಲ್ಲಿ ಜಾಗೃತಿ ಮೂಡಿಸುವುದು ಸೇರಿದಂತೆ ಹತ್ತು ಹಲವು ವಿನೂತನ ಅಭಿಯಾನಗಳಲ್ಲಿ ಬೆಂಗಳೂರು ನಗರ ಟ್ರಾಫಿಕ್ ಪೊಲೀಸರು ಭಾಗಿಯಾಗಿದ್ದರು. ಇತ್ತೀಚಿಗಷ್ಟೆ ಕೆಲ ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚುವ ಮೂಲಕ ಟ್ರಾಫಿಕ್ ಪೊಲೀಸರು ಕರ್ತವ್ಯ ನಿಷ್ಟೆಯ ಜೊತೆ ನಾಗರಿಕ ಜವಾಬ್ದಾರಿಯನ್ನೂ ಮೆರೆದಿದ್ದರು.
ಕರ್ನಾಟಕ ರಾಜ್ಯ ಸರ್ಕಾರ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ 'ಮಾತಾಡ್ ಮಾತಾಡ್ ಕನ್ನಡ' ಅಭಿಯಾನದಡಿ ಲಕ್ಷ ಕಂಠಗಳ ಗಾಯನ ಎನ್ನುವ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕನ್ನಡ ನಾಡಿನ ಜವಾಬ್ದಾರಿಯುತ ಪ್ರಜೆಯಾಗಿ ಕನ್ನಡದಲ್ಲೇ ಮಾತನಾಡುವುದು, ಕನ್ನಡದಲ್ಲೇ ಬರೆಯುವುದು, ನಿತ್ಯ ವ್ಯವಹಾರದಲ್ಲಿ ಕನ್ನಡವನ್ನೇ ಬಳಸುವುದು, ಕನ್ನಡ ನಾಡಲ್ಲಿ ವಾಸವಿರುವ ಕನ್ನಡೇತರ ಬಂಧುಗಳಿಗೆ ಪ್ರೀತಿಯಿಂದ ಕನ್ನಡ ಕಲಿಸುವುದು ಇವಿಷ್ಟೂ ಕಾರ್ಯಕ್ರಮದ ಆಶಯವಾಗಿತ್ತು.
ಇದನ್ನೂ ಓದಿ: ವಾಹನ ಸವಾರರಿಗೆ ಗುಡ್ ನ್ಯೂಸ್: ಚಾಲಕರು ಇನ್ಮುಂದೆ ಡಿಎಲ್, ಆರ್'ಸಿ ಬುಕ್ ತೆಗೆದುಕೊಂಡು ಹೋಗಬೇಕಿಲ್ಲ; ಡಿಜಿಟಲ್ ದಾಖಲೆ ಸಾಕು!
Related Article
ಕೇರಳ ರಸ್ತೆ ಅಪಘಾತ: ಮಿಸ್ ಸೌತ್ ಇಂಡಿಯಾ ಆನ್ಸಿ, ಮಾಜಿ ಮಿಸ್ ಕೇರಳ ರನ್ನರ್ ಅಪ್ ಅಂಜನಾ ಸಾವು
ಅಪಾಯದ ಕೂಪವಾದ ಐಷಾರಾಮಿ ಇಂದಿರಾನಗರದ ರಸ್ತೆಗಳು!
ಒಂದು ವಾರದೊಳಗೆ ನಗರದ ರಸ್ತೆಗಳ ಗುಂಡಿಗಳನ್ನು ಮುಚ್ಚಲು ಪೊಲೀಸ್ ಆಯುಕ್ತರಿಗೆ ಸೂಚನೆ: ಸಿಎಂ ಬೊಮ್ಮಾಯಿ
ಕಾಂಗ್ರೆಸ್ ನಿರ್ಮಿಸಿದ ರೈಲ್ವೆ, ವಿಮಾನ ನಿಲ್ದಾಣ, ರಸ್ತೆಗಳನ್ನು ಬಿಜೆಪಿ ಮಾರುತ್ತಿದೆ- ಪ್ರಿಯಾಂಕಾ ಗಾಂಧಿ
ರೈತರಿಗೆ ಪ್ರತಿಭಟನೆ ಮಾಡುವ ಹಕ್ಕಿದೆ ಆದರೆ ಅನಿರ್ದಿಷ್ಟವಾಗಿ ರಸ್ತೆಗಳನ್ನು ನಿರ್ಬಂಧಿಸುವಂತಿಲ್ಲ: ಸುಪ್ರೀಂ
ಬೆಂಗಳೂರು: 'ರಸ್ತೆ ಗುಂಡಿಗಳ ಹಬ್ಬ'ದೊಂದಿಗೆ ಆಮ್ ಆದ್ಮಿ ಪಕ್ಷದಿಂದ ವಿನೂತನ ಪ್ರತಿಭಟನೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

