ಕರ್ನಾಟಕದಲ್ಲಿ ಇಂಧನ ದರ ಕಡಿತ: ಅಧಿಸೂಚನೆ ಹೊರಡಿಸಿದ ರಾಜ್ಯ ಸರ್ಕಾರ; ಪೆಟ್ರೋಲ್, ಡಿಸೇಲ್ ಬೆಲೆ ಎಷ್ಟಾಗಲಿದೆ!
ಪೆಟ್ರೋಲ್ ಹಾಗೂ ಡೀಸಲ್ ದರದಲ್ಲಿ 7 ರೂ. ಇಳಿಕೆ ಮಾಡಿ ಕರ್ನಾಟಕ ಸರ್ಕಾರವು ಇಂದು ಅಧಿಸೂಚನೆ ಹೊರಡಿಸಿದೆ.

ಬೆಂಗಳೂರು: ಪೆಟ್ರೋಲ್ ಹಾಗೂ ಡೀಸಲ್ ದರದಲ್ಲಿ 7 ರೂ. ಇಳಿಕೆ ಮಾಡಿ ಕರ್ನಾಟಕ ಸರ್ಕಾರವು ಇಂದು ಅಧಿಸೂಚನೆ ಹೊರಡಿಸಿದೆ.
ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸಲ್ ದರವನ್ನು ಕ್ರಮವಾಗಿ ರೂ.10 ಹಾಗೂ ರೂ. 5 ಕ್ಕೆ ಇಳಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಈ ಆದೇಶ ಹೊರಡಿಸಿದೆ. ಈ ಆದೇಶ ಹೊರ ಬಿದ್ದ ತಕ್ಷವೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದಲ್ಲಿಯೂ ತೆರಿಗೆ ಕಡಿಮೆ ಮಾಡುವ ನಿರ್ಧಾರ ಪ್ರಕಟಿಸಿದರು. ಆ ಮೂಲಕ ದೇಶದ ಮೊದಲ ರಾಜ್ಯವಾಗಿ ಇಂಧನ ದರ ಇಳಿಸುವ ನಿರ್ಧಾರ ಮಾಡಿದರು.
ಕೇಂದ್ರ ಸರ್ಕಾರವು ಕಡಿತಗೊಳಿಸಿರುವ ಅಬಕಾರಿ ತೆರಿಗೆಯ ಜೊತೆಯಲ್ಲಿ ರಾಜ್ಯ ಸರ್ಕಾರವು ಪೆಟ್ರೋಲ್ ಮೇಲಿನ ಮಾರಟ ತೆರಿಗೆಯನ್ನು 35% ರಿಂದ 25.9%ಕ್ಕೆ ಮತ್ತು ಡೀಸೆಲ್ ಮೇಲಿನ ಮಾರಟ ತೆರಿಗೆಯನ್ನು 24% ರಿಂದ 14.34%ಕ್ಕೆ ಇಳಿಸಿರುತ್ತದೆ. ಇದರಿಂದ ದಿ. 3-11-21ರಂದು ಇದ್ದ ಪೆಟ್ರೋಲ್ನ ಚಿಲ್ಲರೆ ಮಾರಾಟ ದರವು 113.93 ರೂ. ರಿಂದ 100.63 ರೂ.ಗೆ ಬರಲಿದ್ದು, ಒಟ್ಟಾರೆ ದರ ಕಡಿತ 13.30 ರೂ. ಆಗಲಿದೆ.
ಇನ್ನು ಡೀಸೆಲ್ ನ ಚಿಲ್ಲರೆ ಮಾರಾಟ ದರ ರೂ.104.50 ರಿಂದ ರೂ.85.03ಕ್ಕೆ ಬರಲಿದ್ದು, ಒಟ್ಟಾರೆ ದರ ಕಡಿತ ರೂ.19.14 ಆಗಲಿದೆ.

Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


