ಎಲ್ಲೆಡೆ ದೀಪಾವಳಿ ಸಂಭ್ರಮ: ಜನತೆಗೆ ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ ಹಾಗೂ ಗಣ್ಯರಿಂದ ಶುಭಾಶಯ
ದೇಶದಾದ್ಯಂತ ದೀಪಾವಳಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಗಣ್ಯಾತಿ ಗಣ್ಯರು ಗುರುವಾರ ಶುಭಾಶಯಗಳನ್ನು ಕೋರಿದ್ದಾರೆ.

ಬೆಂಗಳೂರು: ದೇಶದಾದ್ಯಂತ ದೀಪಾವಳಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಗಣ್ಯಾತಿ ಗಣ್ಯರು ಗುರುವಾರ ಶುಭಾಶಯಗಳನ್ನು ಕೋರಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು ದೀಪಾವಳಿಯ ಈ ಶುಭ ಸಂದರ್ಭದಲ್ಲಿ ದೇಶವಾಸಿಗಳಿಗೆ ಹಬ್ಬದ ಶುಭಾಶಯಗಳು. ಈ ಬೆಳಕಿನ ಹಬ್ಬವು ನಿಮ್ಮ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಅದೃಷ್ಟವನ್ನು ತರಲಿ ಎಂದು ನಾನು ಬಯಸುತ್ತೇನೆ. ಎಲ್ಲರಿಗೂ ದೀಪಾವಳಿ ಹಬ್ಬದ ಶುಭಾಶಯಗಳು ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಟ್ವೀಟ್ ಮಾಡಿ ವಿಶ್ವದಾದ್ಯಂತ ಇರುವ ಎಲ್ಲಾ ನಮ್ಮ ಪ್ರೀತಿಯ ಕನ್ನಡಿಗರಿಗೆ ಅತ್ಯಂತ ಸಂತೋಷ ಮತ್ತು ಸಮೃದ್ಧ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು. ಈ 'ಬೆಳಕಿನ ಹಬ್ಬ' ನಿಮ್ಮೆಲ್ಲರ ಜೀವನವನ್ನು ಆರೋಗ್ಯ, ಸಂಪತ್ತು, ಸಂತೋಷ ಮತ್ತು ಯಶಸ್ಸಿನಿಂದ ಬೆಳಗಲಿ, ನೀವು ಎಲ್ಲಿಯೇ ಇದ್ದರೂ ನಮ್ಮ ಭೂಮಿಗೆ ಹೆಚ್ಚಿನ ಕೀರ್ತಿಯನ್ನು ತನ್ನಿ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


