ರಾಜ್ಯ

ಬೆಂಗಳೂರು: 11ನೇ ಮಹಡಿಯಿಂದ ಬಿದ್ದು ಬಾಲಕ ದುರ್ಮರಣ

ಆಟವಾಡುತ್ತಿದ್ದ ಬಾಲಕನೋರ್ವ ಅಪಾರ್ಟ್ ಮೆಂಟ್ ನ 11ನೇ ಮಹಡಿಯಿಂದ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿರುವ ದಾರುಣ ಘಟನೆ ರಾಜರಾಜೇಶ್ವರಿ ನಗರದಲ್ಲಿ ನಡೆದಿದೆ.

ಬೆಂಗಳೂರು: 11ನೇ ಮಹಡಿಯಿಂದ ಬಿದ್ದು ಬಾಲಕ ದುರ್ಮರಣ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಆಟವಾಡುತ್ತಿದ್ದ ಬಾಲಕನೋರ್ವ ಅಪಾರ್ಟ್ ಮೆಂಟ್ ನ 11ನೇ ಮಹಡಿಯಿಂದ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿರುವ ದಾರುಣ ಘಟನೆ ರಾಜರಾಜೇಶ್ವರಿ ನಗರದಲ್ಲಿ ನಡೆದಿದೆ. 

ರಾಜರಾಜೇಶ್ವರಿ ನಗರದ ಶೋಭಾ ವ್ಯಾಲಿ ಆಪಾರ್ಟ್ ಮೆಂಟ್ ನ 11ನೇ ಮಹಡಿಯಲ್ಲಿ ನಿನ್ನೆ ಸಂಜೆ ಆಟವಾಡುತ್ತಿದ್ದ ಬಾಲಕ ಗಗನ್ ಆಯತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿರುವುದು  ತಡವಾಗಿ ಬೆಳಕಿಗೆ ಬಂದಿದೆ.

ಮನೆಯಲ್ಲಿ ಪೋಷಕರು ಇಲ್ಲದ ವೇಳೆ ಆಟವಾಡಲು ಬಂದ ಗಗನ್ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ. ಸೆಕ್ಯೂರಿಟಿ ಗಾರ್ಡ್ ಬಾಲಕ ಬಿದ್ದ ಶಬ್ದ ಕೇಳಿ ಓಡಿ ಹೋಗಿ ನೋಡಿದಾಗ ರಕ್ತದ ಮಡುವಿನಲ್ಲಿ ಬಿದ್ದಿದ್ದ ಗಗನ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ರಾಜರಾಜೇಶ್ವರಿ ನಗರ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.