ರಾಜ್ಯ

ಕೋವಿಡ್-19: ಏಳು ಜಿಲ್ಲೆಯಲ್ಲಿ ಶೂನ್ಯ ಪ್ರಕರಣ; ರಾಜ್ಯದಲ್ಲಿಂದು 589 ಹೊಸ ಪ್ರಕರಣ ಪತ್ತೆ, 887 ಚೇತರಿಕೆ, 13 ಸಾವು ದಾಖಲು 

ಕೋವಿಡ್-19 ಪ್ರಕರಣಗಳ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 589 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,76,589ಕ್ಕೆ ಏರಿಕೆಯಾಗಿದೆ.

ಕೋವಿಡ್-19: ಏಳು ಜಿಲ್ಲೆಯಲ್ಲಿ ಶೂನ್ಯ ಪ್ರಕರಣ; ರಾಜ್ಯದಲ್ಲಿಂದು 589 ಹೊಸ ಪ್ರಕರಣ ಪತ್ತೆ, 887 ಚೇತರಿಕೆ, 13 ಸಾವು ದಾಖಲು 
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಕೋವಿಡ್-19 ಪ್ರಕರಣಗಳ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 589 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,76,589ಕ್ಕೆ ಏರಿಕೆಯಾಗಿದೆ.

887 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಗುಣಮುಖರಾದವರ ಒಟ್ಟು ಸಂಖ್ಯೆ 29,26,284ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸದ್ಯ 12,469 ಸಕ್ರಿಯ ಪ್ರಕರಣಗಳಿರುವುದಾಗಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸೋಂಕಿನಿಂದ ಇಂದು ರಾಜ್ಯದಲ್ಲಿ 13 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟಾರೇ ಮೃತರ ಸಂಖ್ಯೆ 37807ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸೋಂಕಿನ ಪ್ರಮಾಣ ಶೇ.0.46 ರಷ್ಟಿದ್ದು, ಮರಣ ಪ್ರಮಾಣ ಶೇ. 2.20 ರಷ್ಟಿದೆ.

ಬೆಂಗಳೂರು ನಗರದಲ್ಲಿ 221 ಹೊಸ ಪ್ರಕರಣ ಪತ್ತೆಯಾಗಿದ್ದು, 212 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಐವರು ಸೋಂಕಿನಿಂದ ಮೃತಪಟ್ಟಿದ್ದಾರೆ.

ಬಾಗಲಕೋಟೆ, ಬೀದರ್, ಗದಗ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಯಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ. ಬೆಂಗಳೂರು ನಗರ ಹೊರತುಪಡಿಸಿದರೆ ಬಹುತೇಕ ಜಿಲ್ಲೆಗಳಲ್ಲಿ ಎರಡಂಕಿ ದಾಟಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.