ರಾಜ್ಯ

ಮಂಗಳೂರು: ಪಿಹೆಚ್​ಡಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ; ಪ್ರಾಧ್ಯಾಪಕನ ಬಂಧನ

ಪಿಹೆಚ್​ಡಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪದಡಿ ಪ್ರಾಧ್ಯಾಪಕನೋರ್ವನನ್ನು ಆಂಧ್ರಪ್ರದೇಶದಲ್ಲಿ ಮಂಗಳೂರು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು: ಪಿಹೆಚ್​ಡಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ; ಪ್ರಾಧ್ಯಾಪಕನ ಬಂಧನ
ಸಂಗ್ರಹ ಚಿತ್ರ
Published On :

ಮಂಗಳೂರು: ಪಿಹೆಚ್​ಡಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪದಡಿ ಪ್ರಾಧ್ಯಾಪಕನೋರ್ವನನ್ನು ಆಂಧ್ರಪ್ರದೇಶದಲ್ಲಿ ಮಂಗಳೂರು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

ಪಿಹೆಚ್​ಡಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಆಂಧ್ರಪ್ರದೇಶದ ಆಚಾರ್ಯ ನಾಗಾರ್ಜುನ ವಿವಿಯ ಪ್ರಾಧ್ಯಾಪಕ ಡಾ.ಕೊಂಡೂರು ಸುಧೀರ್ ಕುಮಾರ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. 

ಮಂಗಳೂರಿನ ವಿದ್ಯಾರ್ಥಿನಿ ಪ್ರಾಧ್ಯಾಪಕಿಯೊಬ್ಬರ ಮಾರ್ಗದರ್ಶನದಲ್ಲಿ ಪಿಹೆಚ್​ಡಿ ಮಾಡುತ್ತಿದ್ದರು. ಈ ಮಧ್ಯೆ ಪರಿಚಯವಾದ ಸುಧೀರ್ ತನ್ನನ್ನು ಮಾರ್ಗದರ್ಶಕನಾಗಿ ನೇಮಿಸುವಂತೆ ಒತ್ತಾಯಿಸಿದ್ದರು.

ಆದರೆ, ವಿವಿಯ ಅನುಮತಿ ಕೇಳಿದಾಗ ಅವರಿಗೆ ಅರ್ಹತೆಯಿಲ್ಲ ಎಂದು ನಿರಾಕರಿಸಲಾಗಿತ್ತು. ಆದರೆ, ಆ ಬಳಿಕವೂ ಸುಧೀರ್ ವಿದ್ಯಾರ್ಥಿನಿ ಮತ್ತು ಮನೆಯವರಿಗೆ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.