ಹೂ ಕುಂಡದಲ್ಲಿಟ್ಟ ಕೀ ಎಗರಿಸಿ ಮನೆಗಳ್ಳತನ: ಖತರ್ನಾಕ್ ಚೋರನ ಬಂಧನ; 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ
ನಗರದಲ್ಲಿ ಮನೆಗಳ್ಳತನ ಮಾಡುತ್ತಿದ್ದ ಆರೋಪಿಯೋರ್ವನನ್ನು ವಿಜಯ ನಗರ ಪೊಲೀಸರು ಬಂಧಿಸಿದ್ದು, ಆತನಿಂದ ಅಪಾರ ಪ್ರಮಾಣದ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು: ನಗರದಲ್ಲಿ ಮನೆಗಳ್ಳತನ ಮಾಡುತ್ತಿದ್ದ ಆರೋಪಿಯೋರ್ವನನ್ನು ವಿಜಯ ನಗರ ಪೊಲೀಸರು ಬಂಧಿಸಿದ್ದು, ಆತನಿಂದ ಅಪಾರ ಪ್ರಮಾಣದ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿ ಶ್ರೀನಿವಾಸ್ ನಿಂದ 10 ಲಕ್ಷ ರೂ. ಮೌಲ್ಯದ 260 ಗ್ರಾಂ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ ಎಂದು ನಗರ ಪಶ್ಚಿಮ ವಿಭಾಗದ ಡಿಸಿಪಿ ಡಾ. ಸಂಜೀವ್ ಪಾಟೀಲ್ ತಿಳಿಸಿದ್ದಾರೆ.
ಗೃಹಿಣಿಯೊಬ್ಬರು ಮನೆ ಲಾಕ್ ಮಾಡಿ ಬೀಗವನ್ನು ಹೂವಿನ ಕುಂಡದಲ್ಲಿಟ್ಟು ಯೋಗ ತರಬೇತಿಗೆ ಹೋಗುತ್ತಿದ್ದರು. ಹೀಗಾಗಿ ಮನೆಗಳ್ಳನಕ್ಕೆ ಬಂದ ಆರೋಪಿಗೆ ಸುಲಭವಾಗಿ ಮನೆಯ ಬೀಗ ಸಿಕ್ಕಿದ್ದು, ಸೆ. 10ರಂದು ಮನೆಯಲ್ಲಿದ್ದ ಲಕ್ಷಾಂತರ ಮೌಲ್ಯದ ನಗದು ಹಾಗೂ ಚಿನ್ನಾಭರಣ ಕದ್ದು ಪರಾರಿಯಾಗಿದ್ದನು.
ಇದನ್ನೂ ಓದಿ: ಬೆಂಗಳೂರಿನಿಂದ ನಾಪತ್ತೆಯಾಗಿದ್ದ ಮೂವರು ಮಕ್ಕಳು ಸೇರಿ ನಾಲ್ವರು ಮಂಗಳೂರಿನಲ್ಲಿ ಪತ್ತೆ; ಪ್ರಕರಣ ಸುಖಾಂತ್ಯ
ಪ್ರಕರಣಕ್ಕೆ ಸಂಬಂಧಿಸಿದಂತೆ ಮನೆ ಮಾಲೀಕೆ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


