ರಾಜ್ಯ

ಬಿಜೆಪಿ ಸರ್ಕಾರದ ನಿರ್ಲಕ್ಷ್ಯದಿಂದ ಕತ್ತಲಲ್ಲಿ ಕರ್ನಾಟಕ: ಕಲ್ಲಿದ್ದಲು ಪೂರೈಕೆಯಲ್ಲಿ ಕೊರತೆ ಬಗ್ಗೆ ಕಾಂಗ್ರೆಸ್ ಟೀಕೆ

ಬಿಜೆಪಿ ಸರ್ಕಾರದ ನಿರ್ಲಕ್ಷ್ಯದಿಂದ ಕತ್ತಲಲ್ಲಿ ಕರ್ನಾಟಕ ಎಂಬಂತಹ ಪರಿಸ್ಥಿತಿ ಸೃಷ್ಟಿಯಾಗಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಟೀಕಿಸಿದೆ.

ಬಿಜೆಪಿ ಸರ್ಕಾರದ ನಿರ್ಲಕ್ಷ್ಯದಿಂದ ಕತ್ತಲಲ್ಲಿ ಕರ್ನಾಟಕ: ಕಲ್ಲಿದ್ದಲು ಪೂರೈಕೆಯಲ್ಲಿ ಕೊರತೆ ಬಗ್ಗೆ ಕಾಂಗ್ರೆಸ್ ಟೀಕೆ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಬಿಜೆಪಿ ಸರ್ಕಾರದ ನಿರ್ಲಕ್ಷ್ಯದಿಂದ ಕತ್ತಲಲ್ಲಿ ಕರ್ನಾಟಕ ಎಂಬಂತಹ ಪರಿಸ್ಥಿತಿ ಸೃಷ್ಟಿಯಾಗಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಟೀಕಿಸಿದೆ.

ರಾಜ್ಯಕ್ಕೆ ಕಲ್ಲಿದ್ದಲು ಪೂರೈಕೆ ಕೊರತೆ ಕುರಿತಂತೆ ಸಾಮಾಜಿಕ ಜಾಲತಾಣ ಕೆಪಿಸಿಸಿ ಟ್ವಿಟರ್ ನಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಲಾಗಿದೆ.  ರಾಜ್ಯಕ್ಕೆ ಪ್ರತಿನಿತ್ಯ 19 ರೇಕ್ ಕಲ್ಲಿದ್ದಲು ಅಗತ್ಯವಿದೆ. ಆದರೆ, ಕೇವಲ 6 ರೇಕ್ ಕಲ್ಲಿದ್ದಲನ್ನು ಪೂರೈಸಲಾಗುತ್ತಿದೆ. ಕರ್ನಾಟಕಕ್ಕೆ ಅಗತ್ಯವಾದ ವಿದ್ಯುತ್ ನಲ್ಲಿ ಶೇ. 52 ರಷ್ಟು ಉಷ್ಣ ವಿದ್ಯುತ್ ಸ್ಥಾವರಗಳಲ್ಲಿಯೇ ಅವಲಂಬಿತವಾಗಿದೆ. ಈಗಾಗಲೇ ಉಡುಪಿಯ ಯುಪಿಸಿಎಲ್ ಸ್ಥಗಿತಗೊಂಡಿರುವುದಾಗಿ ಹೇಳಿದೆ.

ಮತ್ತೊಂದು ಟ್ವೀಟ್ ನಲ್ಲಿ ಕೆಎಸ್ ಈಶ್ವರಪ್ಪ ಅವರ ಬಾಯಲ್ಲಿ ಮುಸ್ಲಿಮರಿಗೆ ಟಿಕೆಟ್ ಸಿಗಬೇಕೆಂದರೆ ಪಕ್ಷದ ಕಚೇರಿಯಲ್ಲಿ ಹತ್ತು ವರ್ಷ ಕಸ ಹೊಡೆಯಬೇಕೆಂದು ಹೇಳಿಸಿದ ಬಿಜೆಪಿ, ಅಲ್ಪಸಂಖ್ಯಾತರಿಗೆ ನೀಡಿದ ಸ್ಥಾನಮಾನ ಏನೆಂದು ಜಗತ್ತಿಗೆ ತಿಳಿಸಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜಕೀಯ ಪಕ್ಷವಾಗಿ ಸಂವಿಧಾನದ ಆಶಯಗಳನ್ನು ಗೌರವಿಸವುದನ್ನು ಬಿಜೆಪಿ ಕಲಿಯಲಿ ಎಂದು ಸಲಹೆ ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.