ರಾಜ್ಯ

ರಾಜ್ಯದಲ್ಲಿ ಮತಾಂತರ ನಿಷೇಧಕ್ಕೆ ಶೀಘ್ರದಲ್ಲೇ ಕಠಿಣ ಕಾನೂನು ಜಾರಿಗೆ ತರಲಾಗುತ್ತದೆ: ಸಿಎಂ ಬೊಮ್ಮಾಯಿ

ರಾಜ್ಯದಲ್ಲಿ ಮತಾಂತರ ನಿಷೇಧ ಮಾಡಲು ಕಠಿಣ ಕಾನೂನನ್ನು ಶೀಘ್ರದಲ್ಲೇ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಹೇಳಿದ್ದಾರೆ.

ರಾಜ್ಯದಲ್ಲಿ ಮತಾಂತರ ನಿಷೇಧಕ್ಕೆ ಶೀಘ್ರದಲ್ಲೇ ಕಠಿಣ ಕಾನೂನು ಜಾರಿಗೆ ತರಲಾಗುತ್ತದೆ: ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Published On :

ಉಡುಪಿ: ರಾಜ್ಯದಲ್ಲಿ ಮತಾಂತರ ನಿಷೇಧ ಮಾಡಲು ಕಠಿಣ ಕಾನೂನನ್ನು ಶೀಘ್ರದಲ್ಲೇ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಹೇಳಿದ್ದಾರೆ. 

ಉಡುಪಿಯ ಪೂರ್ಣಪ್ರಜ್ಞಾ ಕಾಲೇಜಿನಲ್ಲಿ ನೂತನ ವಿಜ್ಞಾನ ಸಮುಚ್ಚಯ ಮತ್ತು ಪೂರ್ಣ ಪ್ರಜ್ಞ ಪದವಿಪೂರ್ವ ಕಾಲೇಜಿನಲ್ಲಿ ಗಣಕ ವಿಜ್ಞಾನ ಪ್ರಯೋಗಾಲಯದ ಉದ್ಘಾಟನೆ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಾಜ್ಯದಲ್ಲಿ ಹೆಚ್ಚುತ್ತಿರುವ ಮತಾಂತರವನ್ನು ನಿಷೇಧಿಸುವ ಕಾಯ್ದೆ ಜಾರಿಗೆ ತರುತ್ತೇವೆ. ಅದಕ್ಕಾಗಿ ಬೇರೆ ಬೇರೆ ರಾಜ್ಯಗಳಲ್ಲಿ ಈಗಾಗಲೇ ಜಾರಿಯಲ್ಲಿರುವ ಮತಾಂತರ ನಿಷೇಧ ಕಾಯ್ದೆಗಳನ್ನು ಅಧ್ಯಯನ ಮಾಡುತ್ತಿದ್ದು, ಶೀಘ್ರದಲ್ಲೇ ನಮ್ಮ ರಾಜ್ಯದಲ್ಲಿ ಸೂಕ್ತ ಕಾಯ್ದೆ ಜಾರಿಗೆ ತರಲಾಗುತ್ತದೆ ಎಂದು ಹೇಳಿದ್ದಾರೆ. 

ಕರಾವಳಿಯಲ್ಲಿ ಗೋಹತ್ಯೆ ಘಟನೆಗಳು ಹೆಚ್ಚುತ್ತಿದ್ದು, ರಾಜ್ಯದಲ್ಲಿ ಈಗಾಗಲೇ ಗೋಹತ್ಯೆ ನಿಷೇಧ ಕಾಯ್ದೆ ಇದೆ. ಅದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.