ರಾಜ್ಯ

ರಾಜ್ಯದಲ್ಲಿ ಮುಂದುವರೆದ ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 232 ಸೇರಿ 470 ಕೇಸ್ ಪತ್ತೆ; 9 ಜಿಲ್ಲೆಗಳಲ್ಲಿ 'ಶೂನ್ಯ' ಪ್ರಕರಣ!

ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಇಂದು ಇಳಿಕೆಯಾಗಿದ್ದು ಕಳೆದ 24 ಗಂಟೆಯಲ್ಲಿ 470 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,82,869ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಮುಂದುವರೆದ ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 232 ಸೇರಿ 470 ಕೇಸ್ ಪತ್ತೆ; 9 ಜಿಲ್ಲೆಗಳಲ್ಲಿ 'ಶೂನ್ಯ' ಪ್ರಕರಣ!
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಇಂದು ಇಳಿಕೆಯಾಗಿದ್ದು ಕಳೆದ 24 ಗಂಟೆಯಲ್ಲಿ 470 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,82,869ಕ್ಕೆ ಏರಿಕೆಯಾಗಿದೆ.

ಮಹಾಮಾರಿಗೆ ಇಂದು 9 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,931ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. 

ಬೆಂಗಳೂರಿನಲ್ಲಿ ಇಂದು 232 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,49,124ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ 1 ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಇಂದು 368 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,35,238ಕ್ಕೆ ಏರಿಕೆಯಾಗಿದೆ. ಇನ್ನು 9,671 ಸಕ್ರೀಯ ಪ್ರಕರಣಗಳಿವೆ. 

ರಾಜ್ಯಾದ್ಯಂತ ಇಂದು 93,806 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 470 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.50ಕ್ಕೆ ಇಳಿದಿದೆ.

ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣಗಳು ವರದಿಯಾಗಿದೆ. ಬಳ್ಳಾರಿ, ಚಿಕ್ಕಬಳ್ಳಾಪುರ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಯಾವುದೇ ಪ್ರಕರಣ ವರದಿಯಾಗಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.