ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ಇನ್ನೂ ನಿರ್ಧಾರ ಕೈಗೊಂಡಿಲ್ಲ: ಸಿಎಂ ಬೊಮ್ಮಾಯಿ
ಬೆಳಗಾವಿಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ಇನ್ನೂ ಅಂತಿಮ ನಿರ್ಧಾರಗಳನ್ನು ಕೈಗೊಂಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಹೇಳಿದ್ದಾರೆ.

ಬೆಳಗಾವಿ: ಬೆಳಗಾವಿಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ಇನ್ನೂ ಅಂತಿಮ ನಿರ್ಧಾರಗಳನ್ನು ಕೈಗೊಂಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಹೇಳಿದ್ದಾರೆ.
ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ಕನ್ನಡಪರ ಸಂಘಟನೆಗಳ ಒತ್ತಾಯ ವಿಚಾರ ಗಮನಕ್ಕೆ ಬಂದಿದೆ. ಈ ಬಗ್ಗೆ ಶೀಘ್ರವೇ ತಜ್ಞರ ಜೊತೆ ಚರ್ಚೆ ನಡೆಸಿ ತೀರ್ಮಾನ ಮಾಡುತ್ತೇವೆಂದು ಹೇಳಿದ್ದಾರೆ.
ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಬರುತ್ತಿದೆ. ಆದರೆ ಮೆರವಣಿಗೆಗಳ ಬಗ್ಗೆ ಇನ್ನೂ ಅಂತಿಮ ತೀರ್ಮಾನವಾಗಿಲ್ಲ ಎಂದು ತಿಳಿಸಿದ್ದಾರೆ.
ಬಳಿಕ ಉಪಚುನಾವಣೆ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ ನಡೆಯುತ್ತಿರುವ ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಬಹುಮತದಿಂದ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಿನ್ನೆ ಸಿಂದಗಿಯಲ್ಲಿ ಪ್ರಚಾರ ಮಾಡಿ, ಇವತ್ತು ಬೆಂಗಳೂರು ಹೋಗುತ್ತಿದ್ದೇನೆ. ವಾಲ್ಮೀಕಿ ಜಯಂತಿಯಲ್ಲಿ ಪಾಲ್ಗೊಂಡು ಇಂದು ಸಂಜೆ ಹಾನಗಲ್‌ಗೆ ವಾಪಸ್ ಆಗಲಿದ್ದೇನೆ. ಮೂರು ದಿನಗಳ ಕಾಲ ಹಾನಗಲ್ನಲ್ಲಿ ಉಳಿದುಕೊಂಡು ಪ್ರಚಾರ ಮಾಡುತ್ತೇನೆ. 23ರಂದು ಬೆಳಗಾವಿಗೆ ಬಂದು ಕಿತ್ತೂರು ಚೆನ್ನಮ್ಮ ಉತ್ಸವದಲ್ಲಿ ಭಾಗಿಯಾಗುತ್ತೇನೆ ಎಂದರು.
ಮುಂಬೈ ಕರ್ನಾಟಕ ಭಾಗವನ್ನು ಕಿತ್ತೂರು ಕರ್ನಾಟಕ ಎಂದು ಮರುನಾಮಕರಣ ಸಂಬಂಧ ಸಂಪುಟ ಸಭೆಯಲ್ಲಿ ತೀರ್ಮಾನ ಆಗಬೇಕು ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


