ರಾಜ್ಯ

ಕೇರಳದಲ್ಲಿ ಮಳೆಯಿಂದ ಅಪಾರ ಹಾನಿ: ಪಿಣರಾಯಿ ವಿಜಯನ್ ಗೆ ಸಿಎಂ ಕರೆ, ಪರಿಹಾರ ಕಾರ್ಯಾಚರಣೆಗೆ ನೆರವಿನ ಭರವಸೆ

ನೆರೆ ರಾಜ್ಯ ಕೇರಳದಲ್ಲಿ ಧಾರಾಕಾರ ಮಳೆಯಿಂದಾಗಿ ಪ್ರವಾಹ ಸೃಷ್ಟಿಯಾಗಿದ್ದು ಭಾರೀ ಪ್ರಮಾಣದಲ್ಲಿ ಹಾನಿ ಉಂಟಾಗುತ್ತಿದೆ.

ಕೇರಳದಲ್ಲಿ ಮಳೆಯಿಂದ ಅಪಾರ ಹಾನಿ: ಪಿಣರಾಯಿ ವಿಜಯನ್ ಗೆ ಸಿಎಂ ಕರೆ, ಪರಿಹಾರ ಕಾರ್ಯಾಚರಣೆಗೆ ನೆರವಿನ ಭರವಸೆ
ಬಸವರಾಜ ಬೊಮ್ಮಾಯಿ
Published On :

ಬೆಂಗಳೂರು: ನೆರೆ ರಾಜ್ಯ ಕೇರಳದಲ್ಲಿ ಧಾರಾಕಾರ ಮಳೆಯಿಂದಾಗಿ ಪ್ರವಾಹ ಸೃಷ್ಟಿಯಾಗಿದ್ದು ಭಾರೀ ಪ್ರಮಾಣದಲ್ಲಿ ಹಾನಿ ಉಂಟಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಅಲ್ಲಿ ಪ್ರವಾಹ ಮತ್ತು ಭೂಕುಸಿತದಿಂದ ಸಂಭವಿಸಿರುವ ಹಾನಿಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದರು.

ಕೇರಳದಲ್ಲಿ ಪ್ರವಾಹ ಪರಿಹಾರ ಕಾರ್ಯಾಚರಣೆಗೆ ಎಲ್ಲ ರೀತಿಯಿಂದಲೂ ಸಹಕಾರ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು. ಈ ಬಗ್ಗೆ ಕೇರಳ ಸರ್ಕಾರದ ಮುಖ್ಯ ಕಾರ್ಯದರ್ಶಿ ಯಾರೊಂದಿಗೆ ಸಂಪರ್ಕದಲ್ಲಿದ್ದು ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ ತಿಳಿಸಿದ್ದಾರೆ. ಕೇರಳ ಜನರ ಸುರಕ್ಷತೆಗಾಗಿ ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ಟ್ವೀಟ್ ಮಾಡಿದ್ದಾರೆ.

ಕೇರಳದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಪ್ರಮಾಣದಲ್ಲಿ ಮಳೆ, ಪ್ರವಾಹ ಹಾಗೂ ಭೂಕುಸಿತ ಉಂಟಾಗುತ್ತಿದೆ. ಪ್ರವಾಹದಿಂದಾಗಿ ಪ್ರಾಣ ಹಾನಿ ಆಸ್ತಿ ಪಾಸ್ತಿ ಹಾನಿ ಉಂಟಾಗಿದೆ. ಕೇರಳದಲ್ಲಿ ಭೂ ಕುಸಿತದಿಂದ ಮೃತಪಟ್ಟವರ ಸಂಖ್ಯೆ 27ಕ್ಕೆ ಏರಿಕೆಯಾಗಿದ್ದು ಆತಂಕ ಸೃಷ್ಟಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.