ಬೆಂಗಳೂರು: ನಗರದಲ್ಲಿ ಲಸಿಕೆ ಅಭಿಯಾನ ತೀವ್ರಗೊಳಿಸಲು ಬಿಬಿಎಂಪಿ ಮುಂದು
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಲಸಿಕೆ ಅಭಿಯಾನವನ್ನು ಮುಂದಿನ ದಿನಗಳಲ್ಲಿ ತೀವ್ರಗೊಳಿಸಲು ಬಿಬಿಎಂಪಿ ನಿರ್ಧರಿಸಿದೆ.

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಲಸಿಕೆ ಅಭಿಯಾನವನ್ನು ಮುಂದಿನ ದಿನಗಳಲ್ಲಿ ತೀವ್ರಗೊಳಿಸಲು ಬಿಬಿಎಂಪಿ ನಿರ್ಧರಿಸಿದೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಬಿಬಿಎಂಪು ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು, ಎಲ್ಲಾ ಸಿಬ್ಬಂದಿಗಳು ಹಾಗೂ ಅಧಿಕಾರಿಗಳ ಸಹಾಯದೊಂದಿಗೆ ಲಸಿಕಾ ಅಭಿಯಾನ ಪರಿಣಾಮಕಾರಿ ರೀತಿಯಲ್ಲಿ ನಡೆಸಲಾಗುತ್ತಿದ್ದು, ಹೀಗಾಗಿಯೇ ನಗರದಲ್ಲಿ ಸೋಂಕು ಪ್ರಕರಣಗಳು ಕಡಿಮೆಯಾಗಿದೆ. ಮುಂದಿನ ದಿನಗಳಲ್ಲಿ ಲಸಿಕೆ ಅಭಿಯಾನವನ್ನು ಮತ್ತಷ್ಟು ತೀವ್ರಗೊಳಿಸಲಾಗುತ್ತದೆ ಎಂದು ಹೇಳಿದ್ದಾರೆ.
ಈ ವರೆಗೂ ಲಸಿಕೆ ಪಡೆದುಕೊಳ್ಳಲು ಅರ್ಹರಿರುವ ಶೇ.86 ರಷ್ಟು ಜನರಿಗೆ ಮೊದಲ ಡೋಸ್ ಹಾಗೂ ಶೇ.52ರಷ್ಟು ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


