ರಾಜ್ಯ

ಮನೆಗೆಲಸದವರ ಮೇಲೆ ಸ್ನೇಹಿತ್ ಮತ್ತು ತಂಡದ ಹಲ್ಲೆ ಪ್ರಕರಣ; ಸೆಕ್ಯುರಿಟಿ ಗಾರ್ಡ್ ಅರೆಸ್ಟ್

ನಿರ್ಮಾಪಕ ಸೌಂದರ್ಯ ಜಗದೀಶ್ ಪುತ್ರ ಸ್ನೇಹಿತ್ ಹಾಗೂ ತಂಡದವರ ಮೇಲಿರುವ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸೌಂದರ್ಯ ಜಗದೀಶ್ ಮನೆ ಸೆಕ್ಯುರಿಟಿ ಗಾರ್ಡ್​ನನ್ನು ಅರೆಸ್ಟ್ ಮಾಡಲಾಗಿದೆ.

ಮನೆಗೆಲಸದವರ ಮೇಲೆ ಸ್ನೇಹಿತ್ ಮತ್ತು ತಂಡದ ಹಲ್ಲೆ ಪ್ರಕರಣ; ಸೆಕ್ಯುರಿಟಿ ಗಾರ್ಡ್ ಅರೆಸ್ಟ್
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ನಿರ್ಮಾಪಕ ಸೌಂದರ್ಯ ಜಗದೀಶ್ ಪುತ್ರ ಸ್ನೇಹಿತ್ ಹಾಗೂ ತಂಡದವರ ಮೇಲಿರುವ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸೌಂದರ್ಯ ಜಗದೀಶ್ ಮನೆ ಸೆಕ್ಯುರಿಟಿ ಗಾರ್ಡ್​ನನ್ನು ಅರೆಸ್ಟ್ ಮಾಡಲಾಗಿದೆ. ಮಹಾಲಕ್ಷ್ಮಿ ಲೇಔಟ್ ಠಾಣೆ ಪೊಲೀಸರಿಂದ ಬಾಲಾಜಿ ಎಂಬುವವನನ್ನು ಬಂಧಿಸಲಾಗಿದೆ. 

ಬಾಲಾಜಿ ಕೂಡ ಹಲ್ಲೆ ಮಾಡಿರುವ ಆರೋಪವಿರುವ ಕಾರಣ, ಆತನನ್ನು ಬಂಧಿಸಲಾಗಿದೆ. ಬಾಲಾಜಿಯನ್ನು ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು. ಉಳಿದ ಆರೋಪಿಗಳ ಪತ್ತೆಗಾಗಿ 3 ವಿಶೇಷ ತಂಡ ರಚನೆ ಮಾಡಲಾಗಿದೆ. ಅಕ್ಟೋಬರ್ 28ಕ್ಕೆ ಆರೋಪಿಗಳು ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ.

ಈಸ್ಟ್ ವೆಸ್ಟ್ ಗ್ರೂಪ್ ಮಾಲೀಕರಾದ ರಜತ್ ಮನೆಗೆ ನುಗ್ಗಿ ಇಬ್ಬರು ಮಹಿಳಾ ಕೆಲಸದವರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.  ಸ್ನೇಹಿತ್ ಹತ್ತು ಜನ ಬೌನ್ಸರ್​ಗಳನ್ನು ಕರೆದುಕೊಂಡು ಬಂದು ಗಲಾಟೆ ಮಾಡಿದ್ದಾರೆ. ಮಹಿಳೆಯರಿಗೆ ಬಟ್ಟೆ ಹರಿದು ಹೋಗುವಂತೆ ಹಾಗು ಗಾಯವಾಗಿ ರಕ್ತ ಬರುವಂತೆ ಹಲ್ಲೆ ನಡೆಸಿದ್ದಾರೆ. 

ರಜತ್ ಮನೆ ಕೆಲಸದವರು ಮನೆ ಕಸ ಗುಡಿಸುತ್ತಿದ್ದಾಗ, ಧೂಳು ಬಿದ್ದಿದೆ ಎಂದು ಅರೋಪಿಸಿ ಮನೆ ಕೆಲಸದವರ ಮೇಲೆ ಹಲ್ಲೆ ನಡೆಸಲಾಗಿದೆ. ನಂತರ ರಜತ್ ಮನೆಯ ಒಳಗೆ ನುಗ್ಗಿ ಗಲಾಟೆ ನಡೆಸಲಾಗಿದೆ ಎಂದು ಆರೋಪಿಸಲಾಗಿತ್ತು. ಜೊತೆಗೆ ಈ ಹಿಂದೆಯೂ ಮೂರು ಬಾರಿ ಸ್ನೇಹಿತ್ ಮತ್ತು ತಂಡ ಗಲಾಟೆ ನಡೆಸಿತ್ತು. 

ಪ್ರಕರಣದ ಕುರಿಂತೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ಸ್ನೇಹಿತ್ ಹಾಗೂ ತಂಡದವರ ವಿರುದ್ಧ ಎಫ್​ಐಆರ್ ದಾಖಲಾಗಿದ್ದು, ಐಪಿಸಿ ಸೆಕ್ಷನ್ 354- ಮಹಿಳೆ ಗೌರವಕ್ಕೆ ಧಕ್ಕೆ, ಐಪಿಸಿ ಸೆಕ್ಷನ್ 323-ಕೈಯಿಂದ ಹಲ್ಲೆ ನಡೆಸುವುದು, ಐಪಿಸಿ‌ ಸೆಕ್ಷನ್ 448 ಅತಿಕ್ರಮಣ ಪ್ರವೇಶ, 506 ಜೀವ ಬೆದರಿಕೆ ಸೇರಿ ವಿವಿಧ ಸೆಕ್ಷನ್​ಗಳಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.