ರಾಜ್ಯ

ಹಾನಗಲ್, ಸಿಂದಗಿ ಉಪಚುನಾವಣೆ: ಎರಡು ಕ್ಷೇತ್ರಗಳ ಮೇಲೆ ಚುನಾವಣಾ ಆಯೋಗದ ಕಣ್ಗಾವಲು

ಅಕ್ಟೋಬರ್ 30 ರಂದು ನಡೆಯಲಿರುವ ಉಪಚುನಾವಣೆ ಹಿನ್ನೆಲೆಯಲ್ಲಿ ಸಿಂದಗಿ ಮತ್ತು ಹಾನಗಲ್‌ನಲ್ಲಿ ಮತದಾರರ ಓಲೈಕೆಗೆ ಹಣದ ಹಂಚಿಕೆ ಸೇರಿದಂತೆ ಅಕ್ರಮ ಚಟುವಟಿಕೆಗಳನ್ನು ತಡೆಯಲು ರಾಜ್ಯ ಚುನಾವಣಾ ಆಯೋಗ ಕಟ್ಟೆಚ್ಚರ ವಹಿಸಿದೆ.

ಹಾನಗಲ್, ಸಿಂದಗಿ ಉಪಚುನಾವಣೆ: ಎರಡು ಕ್ಷೇತ್ರಗಳ ಮೇಲೆ ಚುನಾವಣಾ ಆಯೋಗದ ಕಣ್ಗಾವಲು
ಸಂಗ್ರಹ ಚಿತ್ರ
Published On :

ಬೆಂಗಳೂರು: ಅಕ್ಟೋಬರ್ 30 ರಂದು ನಡೆಯಲಿರುವ ಉಪಚುನಾವಣೆ ಹಿನ್ನೆಲೆಯಲ್ಲಿ ಸಿಂದಗಿ ಮತ್ತು ಹಾನಗಲ್‌ನಲ್ಲಿ ಮತದಾರರ ಓಲೈಕೆಗೆ ಹಣದ ಹಂಚಿಕೆ ಸೇರಿದಂತೆ ಅಕ್ರಮ ಚಟುವಟಿಕೆಗಳನ್ನು ತಡೆಯಲು ರಾಜ್ಯ ಚುನಾವಣಾ ಆಯೋಗ ಕಟ್ಟೆಚ್ಚರ ವಹಿಸಿದೆ.

"ಆಯಾ ಜಿಲ್ಲಾ ಚುನಾವಣಾ ಅಧಿಕಾರಿಗಳು, ವೀಡಿಯೊಗ್ರಾಫರ್‌ಗಳು ಸೇರಿದಂತೆ ಹೆಚ್ಚಿನ ಸಿಬ್ಬಂದಿಯನ್ನು ಎರಡು ಕ್ಷೇತ್ರಗಳಲ್ಲಿ ನಿಯೋಜಿಸಲಿದ್ದು, ಚೆಕ್‌ಪೋಸ್ಟ್‌ಗಳ ಸಂಖ್ಯೆಯನ್ನು ಹೆಚ್ಚಿಸಲಾಗುತ್ತದೆ ಎಂದು ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಮೀನಾ ಹೇಳಿದರು.

ಬುಧವಾರದವರೆಗೆ 4 ಲಕ್ಷ ರೂಪಾಯಿ ಮೌಲ್ಯದ ಮದ್ಯ ವಶಪಡಿಸಿಕೊಂಡಿದ್ದು, ಬಿಟ್ಟರೆ ಹಣ ಹಂಚಿಕೆಯಾಗಿರುವ ಘಟನೆ ವರದಿಯಾಗಿಲ್ಲ ಎಂದರು.

ಉಪಚುನಾವಣೆ ವೇಳೆ ಹಣದ ಹೊಳೆ ಹರಿಯಲಿದೆ ಎಂಬ ಮಾಜಿ ಪ್ರಧಾನಿ ದೇವೇಗೌಡ ಅವರ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿ, ಘಟನೆಗಳ ಕುರಿತು ಬರವಣಿಗೆ ಮೂಲಕ ದೂರುಗಳು ದಾಖಲಾಗಿದ್ದೇ ಆದರೆ, ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.