ರಾಜ್ಯ

ದೀಪಾವಳಿಯ ಬಲಿಪಾಡ್ಯಮಿ ದಿನ ಕಡ್ಡಾಯವಾಗಿ ದೇವಾಲಯಗಳಲ್ಲಿ ಗೋಪೂಜೆ: ರಾಜ್ಯ ಸರ್ಕಾರದ ಆದೇಶ

ಈ ಬಾರಿ ದೀಪಾವಳಿ ಹಬ್ಬದ ಸಮಯದಲ್ಲಿ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ಗೋಪೂಜೆ ನಡೆಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ದೀಪಾವಳಿಯ ಬಲಿಪಾಡ್ಯಮಿ ದಿನ ಕಡ್ಡಾಯವಾಗಿ ದೇವಾಲಯಗಳಲ್ಲಿ ಗೋಪೂಜೆ: ರಾಜ್ಯ ಸರ್ಕಾರದ ಆದೇಶ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಈ ಬಾರಿ ದೀಪಾವಳಿ ಹಬ್ಬದ ಸಮಯದಲ್ಲಿ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ಗೋಪೂಜೆ ನಡೆಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ದೀಪಾವಳಿ ಹಬ್ಬದ ಸಮಯದಲ್ಲಿ ಬಲಿಪಾಡ್ಯಮಿ ದಿನ ಹಿಂದೂಗಳು ತಮ್ಮ ತಮ್ಮ ಮನೆಗಳಲ್ಲಿರುವ ಗೋವುಗಳಿಗೆ ಪೂಜೆ ಮಾಡಿ ತಿನ್ನಲು ನೀಡುತ್ತಿದ್ದರು. ಆದರೆ ಈ ವರ್ಷ ನವೆಂಬರ್ 5ರಂದು ಬಲಿಪಾಡ್ಯಮಿ ದಿನ ಕಡ್ಡಾಯವಾಗಿ ದೇವಸ್ಥಾನಗಳಲ್ಲಿ ಕೂಡ ಪೂಜೆ ಮಾಡಬೇಕೆಂದು ಮುಜರಾಯಿ ಇಲಾಖೆ ಆದೇಶದಲ್ಲಿ ಹೇಳಲಾಗಿದೆ.

ಬಲಿಪಾಡ್ಯಮಿ ದಿನ ಗೋಧೂಳಿ ಲಗ್ನದಲ್ಲಿ ಸಂಜೆ 5.30ರಿಂದ 6.30ರ ಗೋಧೂಳಿ ಲಗ್ನದಲ್ಲಿ ದೇವಸ್ಥಾನಗಳಲ್ಲಿ ಗೋವುಗಳಿಗೆ ಪೂಜೆ ಮಾಡಬೇಕು. ಈ ಮೂಲಕ ಹಿಂದೂ ಸನಾತನ ಧರ್ಮವನ್ನು ಎತ್ತಿ ಹಿಡಿಯಬೇಕು. ಗೋವುಗಳಿಗೆ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದರೆ ಶ್ರೇಯಸ್ಸು ಆಗುತ್ತದೆ ಎಂಬ ನಂಬಿಕೆಯೊಂದಿಗೆ ಪೂಜೆ ಮಾಡಬೇಕೆಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.