ಪುನೀತ್ ಅಂತ್ಯಕ್ರಿಯೆಗೆ ಎಲ್ಲಾ ವ್ಯವಸ್ಥೆ: ಸಾರ್ವಜನಿಕರಿಗೆ ಅವಕಾಶವಿಲ್ಲ- ಮುಖ್ಯಮಂತ್ರಿ ಬೊಮ್ಮಾಯಿ
ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆಗೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರು: ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆಗೆ ಕಂಠೀವರ ಸ್ಟುಡಿಯೋದಲ್ಲಿ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಕಂಠೀವರ ಕ್ರೀಡಾಂಗಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಪುನೀತ್ ರಾಜ್ ಕುಮಾರ್ ಪುತ್ರಿ ದೆಹಲಿ ತಲುಪಿದ್ದು, ಬೆಂಗಳೂರಿಗೆ ಬಂದ ಬಳಿಕ ಅಂತ್ಯಕ್ರಿಯೆ ಮಾಡಲಾಗುವುದು, ಪಾರ್ಥಿವ ಶರೀರದ ಮೆರವಣಿಗೆ ಅಂತ್ಯಕ್ರಿಯೆಗೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ಅಂತ್ಯಕ್ರಿಯೆ ವೇಳೆಯಲ್ಲಿ ಕುಟುಂಬಸ್ಥರಿಗೆ ಮಾತ್ರ ಅವಕಾಶವಿರಲಿದ್ದು, ಸಾರ್ವಜನಿಕರಿಗೆ ಅವಕಾಶ ಇರಲ್ಲ ಎಂದು ಸಿಎಂ ಹೇಳಿದರು.
ಅಂತ್ಯಕ್ರಿಯೆ ಸುಗಮವಾಗಿ ನಡೆಯಲು ಪೊಲೀಸ್ ಹಾಗೂ ಬಿಬಿಎಂಪಿ ಕ್ರಮ ವಹಿಸುತ್ತಿದ್ದಾರೆ.ಗೌರವದಿಂದ ಶಾಂತಿಯುತವಾಗಿ ಪುನೀತ್ ರಾಜ್ ಕುಮಾರ್ ಅವರನ್ನು ಬೀಳ್ಗೂಡಬೇಕಾಗಿದೆ. ಸಾರ್ವಜನಿಕರು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದ ರೀತಿಯಲ್ಲಿ ಸಂಯಮದಿಂದ ವರ್ತಿಸಬೇಕೆಂದು ಮುಖ್ಯಮಂತ್ರಿ ಮನವಿ ಮಾಡಿಕೊಂಡರು.
ಈ ಮಧ್ಯೆ ಪುನೀತ್ ರಾಜ್ ಕುಮಾರ್ ಅವರಿಗೆ ಗಂಡು ಮಕ್ಕಳು ಇಲ್ಲದ ಕಾರಣ ಅವರ ಸಹೋದರ ರಾಘವೇಂದ್ರ ರಾಜ್ ಕುಮಾರ್ ಅವರ ಪುತ್ರ ವಿನಯ್ ಕುಮಾರ್ ಅವರು ಅಂತಿಮ ವಿಧಿ ವಿಧಾನ ಕಾರ್ಯ ನೆರವೇರಿಸಲು ಕುಟುಂಬಸ್ಥರು ಒಪ್ಪಿಕೊಂಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


