ರಾಜ್ಯ

ದೆಹಲಿಗೆ ಬಂದಿಳಿದ ಪುನೀತ್ ರಾಜ್ ಕುಮಾರ್ ಪುತ್ರಿ ದ್ರಿತಿ, ಸಂಜೆ ಬೆಂಗಳೂರಿಗೆ ಆಗಮನ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹಿರಿಯ ಪುತ್ರಿ ದೃತಿ ಅವರು ಕೆಲವೇ ಕ್ಷಣಗಳ ಹಿಂದೆ ನವದೆಹಲಿಗೆ ಬಂದಿಳಿದರು.

ದೆಹಲಿಗೆ ಬಂದಿಳಿದ ಪುನೀತ್ ರಾಜ್ ಕುಮಾರ್ ಪುತ್ರಿ ದ್ರಿತಿ, ಸಂಜೆ ಬೆಂಗಳೂರಿಗೆ ಆಗಮನ
ಪುನೀತ್ ರಾಜ್ ಕುಮಾರ್ ಅವರ ಕುಟುಂಬದ ಚಿತ್ರ
Published On :

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹಿರಿಯ ಪುತ್ರಿ ದೃತಿ ಅವರು ಕೆಲವೇ ಕ್ಷಣಗಳ ಹಿಂದೆ ನವದೆಹಲಿಗೆ ಬಂದಿಳಿದರು.

ಅಮೆರಿಕಾದಿಂದ ಪ್ರಯಾಣಿಸಿದ್ದ ಅವರು ದೆಹಲಿಯ ಇಂದಿರಾಗಾಂಧಿ  ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿದ್ದಾರೆ. ಇಂದು ಮಧ್ಯಾಹ್ನ 1-30ಕ್ಕೆ ಹೊರಡಲಿರುವ ಏರ್ ಇಂಡಿಯಾದ ವಿಶೇಷ ವಿಮಾನ 502 ವಿನಲ್ಲಿ ಬೆಂಗಳೂರು ತಲುಪುತ್ತಾರೆ.

ಸಂಜೆ 4-15ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಲಿರುವ ದ್ರಿತಿ, ಅಲ್ಲಿಂದ ನೇರವಾಗಿ ಕಂಠೀರವ ಸ್ಟುಡಿಯೋಗೆ ತೆರಳಲಿದ್ದು, ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲಿದ್ದಾರೆ. 

ಈ ಮಧ್ಯೆ ಮಧ್ಯಾಹ್ನ ಮೂರು ಗಂಟೆಗೆ ಪುನೀತ್ ರಾಜ್ ಕುಮಾರ್ ಅವರ ಪಾರ್ಥಿವ ಶರೀರದ ಮೆರವಣಿಗೆಗೆ ಸಿದ್ಧತೆ ನಡೆಸಲಾಗಿದೆ. ಕಂಠೀರವ ಕ್ರೀಡಾಂಗಣದಿಂದ ಕಾರ್ಪೋರೇಷನ್ ಸರ್ಕಲ್, ಬಸವೇಶ್ವರ ಸರ್ಕಲ್, ವಿಂಡ್ಸರ್ ಮ್ಯಾನರ್,  ಸ್ಯಾಂಕಿ ಟ್ಯಾಂಕ್, ಸರ್ಕಲ್ ಮಾರಮ್ಮ ದೇವಾಲಯ, ಯಶವಂತಪುರ ಮತ್ತು ಗೊರಗುಂಟೆ ಪಾಳ್ಯ ಮಾರ್ಗವಾಗಿ ಕಂಠೀರವ ಸ್ಟುಡಿಯೋಗೆ ಪಾರ್ಥಿವ ಶರೀರ ತಲುಪಲಿದ್ದು, ಸಂಜೆ ಅಂತ್ಯ ಸಂಸ್ಕಾರ ನಡೆಯಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.