ರಾಜ್ಯದಲ್ಲಿಂದು ಕೊರೋನಾಗೆ 11 ಬಲಿ: 292 ಹೊಸ ಪ್ರಕರಣ ಪತ್ತೆ, 345 ಸೋಂಕಿತರು ಗುಣಮುಖ
ರಾಜ್ಯದಲ್ಲಿ ಕೊರೋನಾ ಇಳಿಕೆ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 292 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2, 98, 8333ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಇಳಿಕೆ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 292 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2, 98, 8333ಕ್ಕೆ ಏರಿಕೆಯಾಗಿದೆ.
345 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಸದ್ಯ 8,644 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸೋಂಕಿನಿಂದ ಇಂದು 11 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೂ ಮೃತಪಟ್ಟವರ ಒಟ್ಟು ಸಂಖ್ಯೆ 38,082ಕ್ಕೆ ಏರಿಕೆಯಾಗಿದೆ. ಒಟ್ಟು ಸೋಂಕಿನ ಪ್ರಮಾಣ ಶೇ. 0.27 ರಷ್ಟಿದ್ದು, ಮರಣ ಪ್ರಮಾಣ ಶೇ. 3.76 ರಷ್ಟಿದೆ.
ಬೆಂಗಳೂರಿನಲ್ಲಿ 137 ಹೊಸ ಪ್ರಕರಣ ಪತ್ತೆಯಾಗಿದ್ದು, 204 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಏಳು ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಬಾಗಲಕೋಟೆ, ಬಳ್ಳಾರಿ, ಬೀದರ್, ಚಾಮರಾಜನಗರ, ಧಾರವಾಡ, ಗದಗ್, ಕೊಪ್ಪಳ, ರಾಯಚೂರು, ರಾಮನಗರದಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


