ರಾಜ್ಯ

ಜಿಲ್ಲಾ ಪಂಚಾಯ್ತಿ ನೇಮಕಾತಿ 2021: ಆಸಕ್ತರು ಅರ್ಜಿ ಸಲ್ಲಿಸಬಹುದು 

ಬಾಗಲಕೋಟೆ ಜಿಲ್ಲಾ ಪಂಚಾಯಿತಿಯಲ್ಲಿ ವಿವಿಧ ಹುದ್ದೆಗಳಿಗಾಗಿ ನೇಮಕ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲಾ ಪಂಚಾಯ್ತಿ ನೇಮಕಾತಿ 2021: ಆಸಕ್ತರು ಅರ್ಜಿ ಸಲ್ಲಿಸಬಹುದು 
ಸಂಗ್ರಹ ಚಿತ್ರ
Published On :

ಬಾಗಲಕೋಟೆ: ಬಾಗಲಕೋಟೆ ಜಿಲ್ಲಾ ಪಂಚಾಯಿತಿಯಲ್ಲಿ ವಿವಿಧ ಹುದ್ದೆಗಳಿಗಾಗಿ ನೇಮಕ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 

ಹುದ್ದೆಗಳ ಹೆಸರು: ಆಡಳಿತ ಸಹಾಯಕರು, ತಾಲೂಕು ಐಇಸಿ ಸಂಯೋಜಕ
ಒಟ್ಟು ಹುದ್ದೆಗಳು: 10
ಆಡಳಿತ ಸಹಾಯಕರು: 9
ತಾಲೂಕು ಐಇಸಿ ಸಂಯೋಜಕ: 1

ಉದ್ಯೋಗ ಸ್ಥಳ ಬಾಗಲಕೋಟೆ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15-09-2021

ಅರ್ಜಿ ಸಲ್ಲಿಸುವ ವಿಧಾನ
ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಜಿಲ್ಲಾ ಪಂಚಾಯತ್ ಕಾರ್ಯಾಲಯ, ಬಾಗಲಕೋಟೆಯಿಂದ ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ, ಅಜಯ್ ಸೂಳೀಕೇರಿ, ಐಇಸಿ ಸಂಯೋಜಕ ಅವರಿಗೆ ಸಲ್ಲಿಸಬೇಕು.

ಆಯ್ಕೆ ವಿಧಾನ
ಹೊರ ಗುತ್ತಿಗೆ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ. 

ವಿದ್ಯಾರ್ಹತೆ:
ಆಡಳಿತ ಸಹಾಯಕ ಹುದ್ದೆಗೆ, ಬಿಕಾಂ ಪದವಿ ಜೊತೆಗೆ ಕನ್ನಡ, ಇಂಗ್ಲಿಷ್ ಭಾಷೆ ಮತ್ತು ಟೈಪಿಂಗ್ ನಲ್ಲಿ ಪರಿಣಿತಿ ಹೊಂದಿರಬೇಕು. ಕಂಪ್ಯೂಟರ್ ಪರಿಣಿತಿ ಹೊಂದಿರಬೇಕು. 
ತಾಲೂಕು ಐಇಸಿ ಸಂಯೋಜಕ ಹುದ್ದೆಗೆ ಸ್ನಾತಕೋತ್ತರ ಪದವಿ ಕಡ್ಡಾಯ

ಅನುಭವ:
ತಾಲೂಕು ಐಇಸಿ ಸಂಯೋಜಕ ಹುದ್ದೆಗೆ 2 ರಿಂದ ಮೂರು ವರ್ಷ ಸಂಭಂಧಿಸಿದ ಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು. 

Story image

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.