ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೋರ್ವ ಶಾಸಕರ ಐಷಾರಾಮಿ ಕಾರು ಅಪಘಾತ
ತಮಿಳುನಾಡು ಶಾಸಕರ ಪುತ್ರನ ಕಾರು ಅಪಘಾತದಲ್ಲಿ 7 ಮಂದಿ ಮೃತಪಟ್ಟ ಘಟನೆ ಇನ್ನೂ ಹಸಿರಾಗಿವಂತೆಯೇ ಬೆಂಗಳೂರಿನಲ್ಲಿ ಮತ್ತೋರ್ವ ಶಾಸಕರಿಗೆ ಸೇರಿದ ಕಾರು ಅಪಘಾತಕ್ಕೀಡಾಗಿದೆ.

ಬೆಂಗಳೂರು: ತಮಿಳುನಾಡು ಶಾಸಕರ ಪುತ್ರನ ಕಾರು ಅಪಘಾತದಲ್ಲಿ 7 ಮಂದಿ ಮೃತಪಟ್ಟ ಘಟನೆ ಇನ್ನೂ ಹಸಿರಾಗಿವಂತೆಯೇ ಬೆಂಗಳೂರಿನಲ್ಲಿ ಮತ್ತೋರ್ವ ಶಾಸಕರಿಗೆ ಸೇರಿದ ಕಾರು ಅಪಘಾತಕ್ಕೀಡಾಗಿದೆ.
ಬೆಂಗಳೂರಿನ ಯಲಹಂಕ ಮೇಲ್ಸೇತುವೆ ಬಳಿ ಶನಿವಾರ ರಾತ್ರಿ ಐಷಾರಾಮಿ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಬಾವ ಮೊಹದ್ ಫಾರೂಕ್ ಒಡೆತನದಲ್ಲಿರುವ ಕಾರು ಫೆರಾರಿ ಕಾರು ಅಪಘಾತಕ್ಕೀಡಾಗಿದೆ ಎಂದು ಹೇಳಲಾಗಿದೆ. ಫಾರೂಖ್ ಒಡೆತನದ MH 02 FF 5555 ನಂಬರಿನ ಐಷಾರಾಮಿ ಫೆರಾರಿ ಪೋರ್ಟೋಫಿನೋ ಕಾರು ನಿಯಂತ್ರಣ ತಪ್ಪಿ ಮೊದಲಿಗೆ ಮತ್ತೊಂದು ಕಾರಿಗೆ ಡಿಕ್ಕಿಯಾಗಿ ಬಳಿಕ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಅಪಘಾತ ಸಂಭವಿಸಲು ಅತೀ ವೇಗವೇ ಕಾರಣನಾ? ಎಂದು ತನಿಖೆ ನಡೆಸುತ್ತಿದ್ದಾರೆ. ಆದರೆ ಚಾಲಕ ಹಾಗೂ ಫೆರಾರಿ ಕಾರು ಅಪಘಾತದ ಬಗ್ಗೆ ಮಾಹಿತಿ ಬಿಟ್ಟುಕೊಡಲು ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ.
ಇತ್ತೀಚೆಗಷ್ಟೇ ಬೆಂಗಳೂರಿನ ಕೋರಮಂಗಲದ ಮಂಗಳ ಕಲ್ಯಾಣಮಂಟಪದ ಬಳಿ ಭೀಕರ ಕಾರು ಅಪಘಾತ ಸಂಭವಿಸಿದ್ದು 7 ಮಂದಿ ಮೃತಪಟ್ಟಿದ್ದರು. ಇದೀಗ ನಗರದಲ್ಲಿ ಮತ್ತೆ ಐಷಾರಾಮಿ ಕಾರು ಅಪಘಾತ ಸಂಭವಿಸಿದೆ. ಯಲಹಂಕ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಾರು ಚಲಾಯಿಸುತ್ತಿದ್ದವರು ಯಾರು ಎಂಬ ಬಗ್ಗೆ ಇನ್ನೂ ಪೊಲೀಸರು ಮಾಹಿತಿ ಬಿಟ್ಟುಕೊಟ್ಟಿಲ್ಲ. ಯಲಹಂಕ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


