ಕಳೆದ ಒಂದು ವಾರದಲ್ಲಿ ಶೂನ್ಯ ಕೋವಿಡ್-19 ಪ್ರಕರಣ; ಶೀಘ್ರವೇ ಕೋವಿಡ್ ಮುಕ್ತ ಜಿಲ್ಲೆಯಾಗುವತ್ತ ಗದಗ
ಇದೇ ಮೊದಲ ಬಾರಿಗೆ ಗದಗ ಜಿಲ್ಲೆ ಕಳೆದ ಒಂದು ವಾರದಲ್ಲಿ ಶೂನ್ಯ ಕೋವಿಡ್-19 ದಾಖಲಿಸಿದ್ದು ಕಳೆದ ಒಂದು ತಿಂಗಳಿನಿಂದ ಕೋವಿಡ್-19 ಸಂಬಂಧಿತ ಸಾವುಗಳ ಸಂಖ್ಯೆಯೂ ಶೂನ್ಯಕ್ಕೆ ಇಳಿದಿದೆ.

ಗದಗ: ಇದೇ ಮೊದಲ ಬಾರಿಗೆ ಗದಗ ಜಿಲ್ಲೆ ಕಳೆದ ಒಂದು ವಾರದಲ್ಲಿ ಶೂನ್ಯ ಕೋವಿಡ್-19 ದಾಖಲಿಸಿದ್ದು ಕಳೆದ ಒಂದು ತಿಂಗಳಿನಿಂದ ಕೋವಿಡ್-19 ಸಂಬಂಧಿತ ಸಾವುಗಳ ಸಂಖ್ಯೆಯೂ ಶೂನ್ಯಕ್ಕೆ ಇಳಿದಿದೆ.
ಗದಗ ಜಿಲ್ಲೆಯ ಪಾಸಿಟಿವಿಟಿ ದರ ಶೇ.0.06ಕ್ಕೆ ಇಳಿಕೆಯಾಗಿದೆ. 7 ದಿನಗಳಿಗೂ ಹಿಂದೆ, ದಿನವೊಂದಕ್ಕೆ ಜಿಲ್ಲೆಯಲ್ಲಿ ಒಂದು ಅಥವಾ ಎರಡು ಕೋವಿಡ್-19 ಸೋಂಕು ಪ್ರಕರಣಗಳು ವರದಿಯಾಗುತ್ತಿದ್ದವು. ಆದರೆ ಕೋವಿಡ್-19 ಪ್ರಾರಂಭವಾದಾಗಿನಿಂದಲೂ ಇದೇ ಮೊದಲ ಬಾರಿಗೆ ಸತತ 7 ನೇ ದಿನವೂ ಕೋವಿಡ್-19 ಹೊಸ ಸೋಂಕಿತರ ಸಂಖ್ಯೆ ಶೂನ್ಯಕ್ಕೆ ಇಳಿದಿದೆ. ಬುಲೆಟಿನ್ ಡೇಟಾದ ಮಾಹಿತಿಯ ಪ್ರಕಾರ ಜಿಲ್ಲೆಯಲ್ಲಿ 9 ಸಕ್ರಿಯ ಪ್ರಕರಣಗಳಷ್ಟೇ ಇದೆ.
ಜಿಲ್ಲೆಯ ಜನರಿಗೆ ಇದು ಒಳ್ಳೆಯ ಸುದ್ದಿಯಾಗಿರಬಹುದು. ಆದರೆ ಅಧಿಕಾರಿಗಳು ಹಬ್ಬದ ದಿನಗಳಲ್ಲಿ ಕೋವಿಡ್-19 ಹೆಚ್ಚು ಹರಡುವ ಭೀತಿ ಇರುವುದರಿಂದ ಜನತೆಗೆ ಕೋವಿಡ್ ನಿಯಮಗಳನ್ನು ಪಾಲನೆ ಮಾಡಲು ಸೂಚನೆ ನೀಡಿದ್ದಾರೆ.
ಗದಗ ಗ್ರಾಮೀಣ ಭಾಗದಲ್ಲಿ ಕಳೆದ 15 ದಿನಗಳಿಂದ ಸಂಪೂರ್ಣ ನಿಯಂತ್ರಣದಲ್ಲಿದೆ. 50 ಕ್ಕೂ ಹೆಚ್ಚಿನ ಗ್ರಾಮಗಳಲ್ಲಿನ ಜನತೆಗೆ ಲಸಿಕೆ ಪೂರ್ಣ ಪ್ರಮಾಣದಲ್ಲಿ ನೀಡಲಾಗಿದ್ದು, ಜಿಲ್ಲಾಡಳಿತ ಮೂರನೇ ಅಲೆ ಎದುರಿಸುವುದಕ್ಕೆ ಸಜ್ಜುಗೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


