ಐವರು ಆತ್ಮಹತ್ಯೆ ಪ್ರಕರಣ: ಶಂಕರ್ ಮನೆಯಲ್ಲಿ 15 ಲಕ್ಷ ನಗದು, ಚಿನ್ನಾಭರಣ ಪತ್ತೆ!
ಒಂದೇ ಕುಟುಂಬದ ಐವರು ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ಪೊಲೀಸರು ಸ್ಥಳ ಮಹಜರು ಮುಗಿಸಿದ್ದು, ಈ ವೇಳೆ ಹಲವು ಪ್ರಮುಖ ಸಾಕ್ಷ್ಯಗಳು ಪತ್ತೆಯಾಗಿವೆ ಎಂದು ಪೊಲೀಸ್ ಉನ್ನತ ಮೂಲಗಳಿಂದ ತಿಳಿದು ಬಂದಿದೆ.

ಬೆಂಗಳೂರು: ಒಂದೇ ಕುಟುಂಬದ ಐವರು ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ಪೊಲೀಸರು ಸ್ಥಳ ಮಹಜರು ಮುಗಿಸಿದ್ದು, ಈ ವೇಳೆ ಹಲವು ಪ್ರಮುಖ ಸಾಕ್ಷ್ಯಗಳು ಪತ್ತೆಯಾಗಿವೆ ಎಂದು ಪೊಲೀಸ್ ಉನ್ನತ ಮೂಲಗಳಿಂದ ತಿಳಿದು ಬಂದಿದೆ.
ತಿಗಳರಪಾಳ್ಯದ ಮನೆಯಲ್ಲಿ ಎಸಿಪಿ, ಇನ್ಸ್ಪೆಕ್ಟರ್ ಗಳ ನೇತೃತ್ವದಲ್ಲಿಇಂದು ಸ್ಥಳ ಮಹಜರು ನಡೆದಿದ್ದು, ಈ ವೇಳೆ ಮೂವರ ಡೆತ್ ನೋಟ್ ಪತ್ತೆಯಾಗಿವೆ. ಅಲ್ಲದೇ, ಮನೆಯಲ್ಲಿ 15 ಲಕ್ಷ ರೂ.ನಗದು, ಎರಡು ಕೆ.ಜಿ.ಯಷ್ಟು ಚಿನ್ನಾಭರಣ ಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿವೆ.
ಸುಮಾರು ಹತ್ತಕ್ಕೂ ಹೆಚ್ಚು ಅಧಿಕಾರಿಗಳು ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮನೆ ಮಾಲೀಕ ಶಂಕರ್, ಇಬ್ಬರು ಅಳಿಯಂದಿರು, ಒಬ್ಬ ಸಂಬಂಧಿಕ ಸಹ ಉಪಸ್ಥಿತರಿದ್ದರು. ಪೊಲೀಸರು ಕೀ ಮೇಕರ್ ನನ್ನು ಕರೆಸಿ, ಲಾಕರ್ ತೆಗೆಸಿದ್ದಾರೆ. ಅಲ್ಲದೇ ತಪಾಸಣೆ ವೇಳೆ ಮನೆಯ ರೂಮ್ಗಳಲ್ಲಿ ಅಲ್ಲಲ್ಲಿ ನೋಟುಗಳು ಹರಿದು ಬಿದ್ದಿದ್ದವು ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


