ಮೈಸೂರು ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳಿಗೆ ಮರಣ ದಂಡನೆ ಆಗುವಂತೆ ಮಾಡುತ್ತೇವೆ: ಸಿಎಂ ಬೊಮ್ಮಾಯಿ
ಮೈಸೂರು ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳಿಗೆ ಮರಣ ದಂಡನೆ ಆಗುವಂತೆ ಮಾಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರು: ಮೈಸೂರು ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳಿಗೆ ಮರಣ ದಂಡನೆ ಆಗುವಂತೆ ಮಾಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಿಎಂ ಬೊಮ್ಮಾಯಿ, ಮೈಸೂರು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಯುವತಿ ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಸದನಕ್ಕೆ ಮಾಹಿತಿ ನೀಡಿದರು.
ವಿಧಾನಸಭೆಯಲ್ಲಿ ನಿಲುವಳಿ ಸೂಚನೆ ಮಂಡಿಸಿ ನಿಯಮ 69 ಅಡಿಯಲ್ಲಿ ನಡೆಯುತ್ತಿದ್ದ ಚರ್ಚೆಯಲ್ಲಿ ಮಾತನಾಡುತ್ತಾ ಸಿದ್ದರಾಮಯ್ಯ, ಅವರು ಪ್ರಕರಣವನ್ನು ಸರ್ಕಾರ ನಿರ್ವಹಣೆ ಮಾಡಿದ ರೀತಿ ಸರಿ ಇಲ್ಲ. ಈವರೆಗೆ ಸಂತ್ರಸ್ತೆಯ ಹೇಳಿಕೆ ಪಡೆದುಕೊಂಡಿಲ್ಲ ಎಂದು ಆರೋಪಿಸಿದರು.
ಇದಕ್ಕೆ ಉತ್ತರ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ಮೈಸೂರು ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಯುವತಿ ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ ನೀಡಿದ್ದಾರೆ. ಯುವತಿಯ ಹೇಳಿಕೆ ಪಡೆದುಕೊಳ್ಳುವಲ್ಲಿ ಪೊಲೀಸರು ಯಶಸ್ವಿ ಆಗಿದ್ದಾರೆ. ಮೈಸೂರು ಅತ್ಯಾಚಾರ ಪ್ರಕರಣದ ತನಿಖೆಯನ್ನು ಬಿಗಿಯಾಗಿ ಮಾಡುತ್ತೇವೆ. ಸರಿಯಾದ ರೀತಿಯಲ್ಲಿ ಚಾರ್ಜ್‌ಶೀಟ್ ಹಾಕುತ್ತೇವೆ. ಈ ಪ್ರಕರಣದ ತನಿಖೆಯ ದೃಷ್ಟಿಯಿಂದ ವಿಶೇಷ ಅಭಿಯೋಜಕರ ನೇಮಕ ಮಾಡುತ್ತೇವೆ. ಅಷ್ಟೇ ಅಲ್ಲದೆ ಆರೋಪಿಗಳಿಗೆ ಮರಣ ದಂಡನೆ ಶಿಕ್ಷೆ ಆಗುವಂತೆ ಮಾಡುತ್ತೇವೆ ಎಂದು ಭರವಸೆ ಕೊಟ್ಟರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


