ರಾಜ್ಯ

ತಂದೆಯಾದ ಖುಷಿಯಲ್ಲಿ ನಿಖಿಲ್ ಕುಮಾರಸ್ವಾಮಿ: ಮಾಜಿ ಪಿಎಂ ದೇವೇಗೌಡರ ಕುಟುಂಬಕ್ಕೆ ಹೊಸ ಸದಸ್ಯನ ಆಗಮನ

ಸ್ಯಾಂಡಲ್‌ವುಡ್ ಯುವರಾಜ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಹಾಗೂ ಪತ್ನಿ ರೇವತಿ ಗಂಡು ಮಗುವನ್ನು ಕುಟುಂಬಕ್ಕೆ ಬರ ಮಾಡಿಕೊಂಡಿದ್ದಾರೆ.

ತಂದೆಯಾದ ಖುಷಿಯಲ್ಲಿ ನಿಖಿಲ್ ಕುಮಾರಸ್ವಾಮಿ: ಮಾಜಿ ಪಿಎಂ ದೇವೇಗೌಡರ ಕುಟುಂಬಕ್ಕೆ ಹೊಸ ಸದಸ್ಯನ ಆಗಮನ
ನಿಖಿಲ್ ರೇವತಿ
Published On :

ಬೆಂಗಳೂರು: ಸ್ಯಾಂಡಲ್‌ವುಡ್ ಯುವರಾಜ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಹಾಗೂ ಪತ್ನಿ ರೇವತಿ ಗಂಡು ಮಗುವನ್ನು ಕುಟುಂಬಕ್ಕೆ ಬರ ಮಾಡಿಕೊಂಡಿದ್ದಾರೆ. 

ಈ ಮೂಲಕ ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡ ಅವರ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದೆ. ತಾಯಿ, ಮಗು ಇಬ್ಬರೂ ಆರೋಗ್ಯವಾಗಿದ್ದಾರೆ.

ಈ ಸಂಬಂಧ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, ನನ್ನ ಜೀವನದಲ್ಲಿ ಇನ್ನೊಂದು ಶುಭ ಘಳಿಗೆ ಬಂದಿದೆ. ನಮ್ಮ ಪರಿವಾರಕ್ಕೆ ಹೊಸ ಸದಸ್ಯನ ಆಗಮನವಾಗಿದೆ. ತಾತನಾದೆ ಎಂದು ಹೇಳಲು ಅತೀವ ಸಂತಸವಾಗುತ್ತಿದೆ. ಕಂದನಿಗೆ ನಿಮ್ಮೆಲ್ಲರ ಹಾರೈಕೆ ಮತ್ತು ಆಶೀರ್ವಾದ ಇರಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದು ಖುಷಿ ಹಂಚಿಕೊಂಡಿದ್ದಾರೆ.

ಮಗು ಆಗಮನದ ಬಗ್ಗೆ ಜೆಡಿಎಸ್ ಶಾಸಕ ಶರವಣ ಟ್ಟೀಟ್ ಮೂಲಕ ತಿಳಿಸಿದ್ದಾರೆ. 'ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ಅವರಿಗೆ ಗಂಡು ಮಗು ಜನನವಾಗಿದೆ. ಮಾಜಿ ಪ್ರಧಾನಿ ಶ್ರೀ ಹೆಚ್ ಡಿ ದೇವೇಗೌಡರ ಮರಿ-ಮೊಮ್ಮಗ ಆಗಮನ ಅತ್ಯಂತ ಸಂತೋಷ ತಂದಿರುವಂತಹ ವಿಷಯ. ಶಿರಡಿ ಸಾಯಿಬಾಬನ ಅನುಗ್ರಹ ಮಗುವಿನ ಮೇಲಿರಲೆಂದು ಆಶಿಸುತ್ತೇನೆ ಎಂದು ಟ್ಟೀಟ್ ಮಾಡಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.