ನವೆಂಬರ್ ನಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ: ಸಚಿವ ಮುರುಗೇಶ್ ನಿರಾಣಿ
ರಾಜ್ಯದಲ್ಲಿ ಮಂದಿನ ವರ್ಷದ ನವೆಂಬರ್ 2ರಿಂದ 4ವರೆಗೆ ಬೆಂಗಳೂರಿನಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಜರುಗಲಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ವಿಧಾನಸಭೆಗಿಂದು ತಿಳಿಸಿದರು.

ಬೆಂಗಳೂರು: ರಾಜ್ಯದಲ್ಲಿ ಮಂದಿನ ವರ್ಷದ ನವೆಂಬರ್ 2ರಿಂದ 4ವರೆಗೆ ಬೆಂಗಳೂರಿನಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಜರುಗಲಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ವಿಧಾನಸಭೆಗಿಂದು ತಿಳಿಸಿದರು.
ಪ್ರಶ್ನೋತ್ತರ ವೇಳೆಯಲ್ಲಿ ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ಉತ್ತರಿಸಿದ ಸಚಿವರು ರಾಜ್ಯದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆ ಮತ್ತು ಕೈಗಾರಿಕೆಗಳಿಗೆ ಉತ್ತೇಜನ ನೀಡುವ ಸದುದ್ದೇಶದಿಂದ 2022ರ ನವೆಂಬರ್ ನಲ್ಲ್ಲಿ ಮೂರು ದಿನಗಳ ಕಾಲ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ.
ಈ ಸಮಾವೇಶದಿಂದ ರಾಜ್ಯಕ್ಕೆ ಹೆಚ್ಚಿನ ಬಂಡವಾಳ ಹರಿದು ಬರವುದಲ್ಲದೆ ಹೆಚ್ಚು ಉದ್ಯೋಗ ದೊರಕಲಿದೆ ಎಂದು ಹೇಳಿದರು. ಯಾದಗಿರಿ ಜಿಲ್ಲೆಯಲ್ಲಿ ರಾಜ್ಯ ಸರ್ಕಾರ, ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಔಷಧಿ ಕಾರ್ಖಾನೆ ತೆರೆಯಲು ತೀರ್ಮಾನಿಸಲಾಗಿದೆ.
ಇದಕ್ಕೆ ಕೇಂದ್ರ ಸಾವಿರ ಕೋಟಿ ಅನುದಾನ ನೀಡಲಿದೆ ಎಂದು ಸಚಿವರು ಹೇಳಿದರು. ಇದಕ್ಕಾಗಿ ಮೂರು ರಾಜ್ಯಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದ್ದು ಇದರಲ್ಲಿ ಕರ್ನಾಟಕವೂ ಸಹ ಆರ್ಥಿಕ ನೆರವು ಪಡೆಯಲಿದೆ ಎಂದು ಸದನಕ್ಕೆ ಮಾಹಿತಿ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


