ಹಾಸನ: ಹಳಿ ದಾಟುತ್ತಿದ್ದಾಗ ಜಾರಿ ಬಿದ್ದ ವಿದ್ಯಾರ್ಥಿನಿಗೆ ರೈಲು ಡಿಕ್ಕಿಯಾಗಿ ಸಾವು, ಭಾರೀ ಆಕ್ರೋಶ
ಹಾಸನದಲ್ಲಿ ರೈಲು ಹಳಿ ಮೇಲೆ ಜಾರಿಬಿದ್ದ ವಿದ್ಯಾರ್ಥಿನಿಗೆ ರೈಲು ಡಿಕ್ಕಿ ಹೊಡೆದು ಆಕೆ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ರೈಲ್ವೇ ಅಧಿಕಾರಿಗಳ ನಿರ್ಲಕ್ಷ್ಯದ ಈ ಘಟನೆ ನಡೆದಿದೆ ಎಂದು ಆರೋಪಿ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಹಾಸನ: ಹಾಸನದಲ್ಲಿ ರೈಲು ಹಳಿ ಮೇಲೆ ಜಾರಿಬಿದ್ದ ವಿದ್ಯಾರ್ಥಿನಿಗೆ ರೈಲು ಡಿಕ್ಕಿ ಹೊಡೆದು ಆಕೆ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ರೈಲ್ವೇ ಅಧಿಕಾರಿಗಳ ನಿರ್ಲಕ್ಷ್ಯದ ಈ ಘಟನೆ ನಡೆದಿದೆ ಎಂದು ಆರೋಪಿ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಹಾಸನ ಜಿಲ್ಲೆಯ ಅಂಕಪುರ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಅಂತಿಮ ವರ್ಷದ ಪದವಿ ಓದುತ್ತಿದ್ದ ಪ್ರೀತಿ ಪುಟ್ಟಸ್ವಾಮಿ ಎಂಬ 22 ವರ್ಷದ ವಿದ್ಯಾರ್ಥಿನಿ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಮೃತಪಟ್ಟಿದ್ದಾಳೆ. ಆಕೆಯ ತಂದೆ ಪುಟ್ಟಸ್ವಾಮಿ ಆಕೆಯನ್ನು ಆಟೋದಲ್ಲಿ ಇಳಿಸಿದ ನಂತರ ಈ ದುರ್ಘಟನೆ ನಡೆದಿದೆ. ಹಳಿಗಳ ಇನ್ನೊಂದು ಬದಿಗೆ ದಾಟಲು ಪ್ರಯತ್ನಿಸುತ್ತಿದ್ದಾಗ ವಿದ್ಯಾರ್ಥಿನಿ ಜಾರಿ ಹಳಿ ಮೇಲೆ ಬಿದ್ದಿದ್ದಾಳೆ. ಈ ವೇಳೆ , ಮುಂದೆ ಬರುತ್ತಿದ್ದ ರೈಲು ಅವಳಿಗೆ ಡಿಕ್ಕಿ ಹೊಡೆದಿದೆ.
ಮೇಲ್ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳು ಹಾಸನ-ಮೈಸೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಟೈರ್‌ಗಳನ್ನು ಸುಟ್ಟು ಹಾಕಿ ತಮ್ಮ ಆಕ್ರೋಶವನ್ನು ಹೊರ ಹಾಕಿದರು. ಮೇಲ್ಸೇತುವೆ ಇಲ್ಲದ ಕಾರಣ ಸ್ಥಳೀಯ ನಿವಾಸಿಗಳು ಮತ್ತು ವಿದ್ಯಾರ್ಥಿಗಳು ಹಳಿ ದಾಟಿ ಮಾರುಕಟ್ಟೆಗೆ , ಕಾಲೇಜಿಗೆ ಹೋಗಬೇಕಾದರೆ ಪರದಾಡಬೇಕಾಗಿದೆ.
ಇದು ಅಕ್ರಮ ಕ್ರಾಸಿಂಗ್ ಆಗಿರುವುದರಿಂದ ಹಳಿಗಳನ್ನು ದಾಟದಂತೆ ನಿವಾಸಿಗಳಿಗೆ ಎಚ್ಚರಿಕೆ ಫಲಕಗಳನ್ನು ಹಾಕಲಾಗಿದೆ. ಆದಾಗ್ಯೂ, ಕಾಲೇಜುಗಳು ಮತ್ತು ಮಾರುಕಟ್ಟೆ ಸಮೀಪವಿರುವ ಕಾರಣ, ನಿವಾಸಿಗಳು ಇನ್ನೊಂದು ಬದಿಗೆ ಹಳಿಗಳನ್ನು ದಾಟಲು ಸುಲಭವಾದ ಮಾರ್ಗದಲ್ಲಿ ಹೋಗುತ್ತಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


