ವರಮಹಾಲಕ್ಷ್ಮಿ ವ್ರತದ ಪ್ರಯುಕ್ತ ಮುಜರಾಯಿ ದೇವಸ್ಥಾನಗಳಲ್ಲಿ ಮಹಿಳೆಯರಿಗೆ ಅರಿಶಿಣ- ಕುಂಕುಮ ವಿತರಣೆ
ಈ ಬಾರಿಯ ವರಮಹಾಲಕ್ಷ್ಮಿ ವ್ರತವನ್ನು ಮುಜರಾಯಿ ಇಲಾಖೆ ವತಿಯಿಂದ ವಿಶೇಷವಾಗಿ ಆಚರಿಸಲು ನಿರ್ಧರಿಸಲಾಗಿದೆ. ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಲಾಗಿರುವ 6 ಹಸಿರುವ ಬಳೆಗಳು ಹಾಗೂ ಕಸ್ತೂರಿ ಅರಿಶಿಣ- ಕುಂಕುಮವನ್ನು ವಿತರಿಸಬೇಕು ಎಂದು ದೇವಾಲಯದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಶಶಿಕಲಾ ಅ ಜೊಲ್ಲೆ ತಿಳಿಸಿದ್ದಾರೆ.

ಬೆಂಗಳೂರು: ಈ ಬಾರಿಯ ವರಮಹಾಲಕ್ಷ್ಮಿ ವ್ರತವನ್ನು ಮುಜರಾಯಿ ಇಲಾಖೆ ವತಿಯಿಂದ ವಿಶೇಷವಾಗಿ ಆಚರಿಸಲು ನಿರ್ಧರಿಸಲಾಗಿದೆ.
ಅಂದು ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿಸಿ, ಮಹಿಳೆಯರಿಗೆ ಉತ್ತಮ ಗುಣಮಟ್ಟದ ಕಸ್ತೂರಿ
ಅರಿಶಿಣ- ಕುಂಕುಮ ಮತ್ತು ಹಸಿರು ಬಳೆಗಳನ್ನು ಗೌರವ ಸೂಚಕವಾಗಿ ನೀಡಬೇಕು ಎಂದು ಮುಜರಾಯಿ ಇಲಾಖೆ ಸುತ್ತೋಲೆ ಹೊರಡಿಸಿದೆ. ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರ ನಿರ್ದೇಶನದ ಮೇರೆಗೆ ಈ ಸುತ್ತೋಲೆಯನ್ನು ಹೊರಡಿಸಲಾಗಿದೆ.
ವರಮಹಾಲಕ್ಷ್ಮಿ ವ್ರತದ ದಿನದಂದು ಮಹಿಳೆಯರು ಮನೆಯಲ್ಲಿ ಪೂಜೆಯನ್ನು ನೆರವೇರಿಸಿ ದೇವಾಲಯಗಳಿಗೆ ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸುವ ಸಂಪ್ರದಾಯವಿದೆ. ಈ ಸಂಪ್ರದಾಯಕ್ಕೆ ಮತ್ತಷ್ಟು ಇಂಬು ನೀಡುವ ಹಾಗೂ ರಾಜ್ಯದ ಮುಜರಾಯಿ ದೇವಸ್ಥಾನಗಳ ವತಿಯಿಂದ ಮಹಿಳೆಯರಿಗೆ ವಿಶೇಷವಾಗಿ ಮಂಗಳ ದ್ರವ್ಯ ಹಾಗೂ ಹಸಿರು ಬಳೆಗಳನ್ನು ನೀಡುವುದರ ಮೂಲಕ ಗೌರವಿಸಬೇಕು ಎನ್ನುವ ಉದ್ದೇಶದಿಂದ ಇತ್ತೀಚಿಗೆ ನಡೆದ ರಾಜ್ಯ ಧಾರ್ಮಿಕ ಪರಿಷತ್ತಿನ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಲಾಗಿತ್ತು.
ಈ ಬಾರಿಯ ವರಮಹಾಲಕ್ಷ್ಮಿ ವ್ರತದ ದಿನದಿಂದ ಮಹಿಳೆಯರಿಗೆ ವಿಶೇಷ ಗೌರವ ನೀಡುವುದು ನಮ್ಮ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಸುತ್ತೋಲೆ ಹೊರಡಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.
ಲಕೋಟೆಯಲ್ಲಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಲಾಗಿರುವ 6 ಹಸಿರುವ ಬಳೆಗಳು ಹಾಗೂ ಕಸ್ತೂರಿ ಅರಿಶಿಣ- ಕುಂಕುಮವನ್ನು ವಿತರಿಸಬೇಕು ಎಂದು ದೇವಾಲಯದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಶಶಿಕಲಾ ಅ ಜೊಲ್ಲೆ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


