ಬಿಜೆಪಿಯವರಿಗೆ ಗೋ ಮಾತೆ ಮೇಲಿನ ಪ್ರೀತಿ ಕೇವಲ ಮತಕ್ಕಾಗಿ ಮಾತ್ರ- ಪ್ರಿಯಾಂಕ್ ಖರ್ಗೆ ಕಿಡಿ
ಬಿಜೆಪಿಯವರಿಗೆ ಗೋ ಮಾತೆ ಮೇಲಿನ ಪ್ರೀತಿ ಕೇವಲ ಚುನಾವಣೆಯಲ್ಲಿ ಮತ ಗಳಿಸುವುದಕ್ಕಾಗಿ ಮಾತ್ರ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.

ಬೆಂಗಳೂರು: ಬಿಜೆಪಿಯವರಿಗೆ ಗೋ ಮಾತೆ ಮೇಲಿನ ಪ್ರೀತಿ ಕೇವಲ ಚುನಾವಣೆಯಲ್ಲಿ ಮತ ಗಳಿಸುವುದಕ್ಕಾಗಿ ಮಾತ್ರ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.
ರಸ್ತೆಯಲ್ಲಿ ಹಸುಗಳು ಸಾಲು ಸಾಲಾಗಿ ಬಿದ್ದಿರುವ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣ ಟ್ವೀಟರ್ ನಲ್ಲಿ ಹಂಚಿಕೊಂಡಿರುವ ಪ್ರಿಯಾಂಕ್ ಖರ್ಗೆ, ಬಿಜೆಪಿ ಸರ್ಕಾರದ ಕೆಟ್ಟ ನೀತಿಗಳ ಪರಿಣಾಮದಿಂದ ಬಿಡಾಡಿ ದನಗಳ ಸಮಸ್ಯೆ ಮಾತ್ರವಲ್ಲದೇ ಹಸುಗಳನ್ನು ಎಲ್ಲೆಂದರಲ್ಲಿ ಬಿಡಲಾಗುತ್ತಿದೆ ಎಂದು ಅವರು ಬರೆದುಕೊಂಡಿದ್ದಾರೆ.
ಗೋಹತ್ಯೆ ಮಸೂದೆಯನ್ನು ಮರು ಪರಿಶೀಲಿಸದಿದ್ದರೆ ಇದು ಕರ್ನಾಟಕದಲ್ಲಿಯೂ ಸಂಭವಿಸುತ್ತದೆ. ಇದರಿಂದ ಸ್ಪಷ್ಟವಾಗುವ ವಿಚಾರ ಎಂದರೆ, ಬಿಜೆಪಿಯವರಿಗೆ ಗೋ ಮಾತೆ ಮೇಲಿನ ಪ್ರೀತಿ ಮತಕ್ಕಾಗಿ ಮಾತ್ರ' ಎಂದು ಅವರು ಟೀಕಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


