ಪ್ರತಿಭಟನೆ ನಡುವೆ ಆಗಸ್ಟ್ 8 ರಿಂದ ಕೆಸಿಇಟಿ ದಾಖಲೆ ಪರಿಶೀಲನೆ ಆರಂಭ
ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಅವರ ನಿವಾಸ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಬಳಿ ಬೃಹತ್ ಪ್ರತಿಭಟನೆ ನಡುವೆ ಆಗಸ್ಟ್ 5 ರಿಂದ ಆರಂಭವಾಗಬೇಕಿದ್ದ ಕೆ ಸಿಇಟಿ ದಾಖಲೆ ಪರಿಶೀಲನೆಯನ್ನು ಪ್ರಾಧಿಕಾರ ಮುಂದೂಡಿದೆ.

ಬೆಂಗಳೂರು: ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಅವರ ನಿವಾಸ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಬಳಿ ಬೃಹತ್ ಪ್ರತಿಭಟನೆ ನಡುವೆ ಆಗಸ್ಟ್ 5 ರಿಂದ ಆರಂಭವಾಗಬೇಕಿದ್ದ ಕೆ ಸಿಇಟಿ ದಾಖಲೆ ಪರಿಶೀಲನೆಯನ್ನು ಪ್ರಾಧಿಕಾರ ಮುಂದೂಡಿದೆ. ಕೆಸಿಇಟಿ ಅಂಕಗಳು ಮತ್ತು ಶ್ರೇಯಾಂಕಗಳಲ್ಲಿ ಪುನರಾವರ್ತಿತರಿಗೆ 2021 ರ ಪಿಯು ಅಂಕಗಳನ್ನು ಸೇರಿಸದ ಪ್ರಾಧಿಕಾರದ ನಿರ್ಧಾರಕ್ಕೆ ಪೋಷಕರು ಮತ್ತು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆದಾಗ್ಯೂ, ಇತರ ವಿದ್ಯಾರ್ಥಿಗಳಿಗೆ ಅನ್ಯಾಯವಾಗಲಿದೆ ಎಂಬುದು ಸಾಬೀತಾಗಿರುವುದರಿಂದ ಕೆಇಎ ನಿರ್ಧಾರದಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಸಚಿವ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. ಈ ಕುರಿತು ಮಂಗಳವಾರ ರಾತ್ರಿ ಟ್ವೀಟ್ ಮಾಡಿರುವ ಸಚಿವರು, 3 ಲಕ್ಷ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 2021-22ನೇ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯುಸಿಯಲ್ಲಿ ತೇರ್ಗಡೆ ಹೊಂದಿ ಈ ವರ್ಷವೂ ಪುನಃ ಸಿಇಟಿ ಬರೆದಿರುವ 24,000 ವಿದ್ಯಾರ್ಥಿಗಳ ಪಿಯುಸಿ ಅಂಕಗಳನ್ನು ಪರಿಗಣಿಸದಿರಲು ಕೆಇಎ ನಿರ್ಧರಿಸಿದ್ದು ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ತಿಳಿಸಲಾಗಿದೆ ಎಂದಿದ್ದಾರೆ.
ಇದರ ಹೊರತಾಗಿಯೂ, ಆಗಸ್ಟ್ 5 ರಿಂದ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸವನ್ನು ಪ್ರಾರಂಭಿಸುವುದಾಗಿ ಪೋಷಕರು ಮತ್ತು ವಿದ್ಯಾರ್ಥಿಗಳು ಹೇಳಿದ್ದಾರೆ. ವಿದ್ಯಾರ್ಥಿಗಳಿಗೆ ತಿಳುವಳಿಕೆ ನೀಡದ ಕಾರಣ ಮತ್ತು ಈ ಹಿಂದೆ ಪ್ರಾಧಿಕಾರದಿಂದ ಯಾವುದೇ ಘೋಷಣೆ ಮಾಡದ ಕಾರಣ ಈ ನಿರ್ಧಾರ ಅಭೂತಪೂರ್ವವಾಗಿದೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


