ರಾಜ್ಯ

ನವೆಂಬರ್ 1ಕ್ಕೆ ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ 'ಕರ್ನಾಟಕ ರತ್ನ': ಸಿಎಂ ಬೊಮ್ಮಾಯಿ

ಉದ್ಯಾನನಗರಿಯ ಸಸ್ಯಕಾಶಿ ಲಾಲ್ ಬಾಗ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವಕ್ಕೆ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ ಮುಖ್ಯ ಆಕರ್ಷಣೆ.

ನವೆಂಬರ್ 1ಕ್ಕೆ ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ 'ಕರ್ನಾಟಕ ರತ್ನ': ಸಿಎಂ ಬೊಮ್ಮಾಯಿ
ಲಾಲ್ ಬಾಗ್ ನಲ್ಲಿ ಇಂದು ಆರಂಭಗೊಂಡಿರುವ ಪುನೀತ್ ರಾಜ್ ಕುಮಾರ್ ಪರಿಕಲ್ಪನೆಯಲ್ಲಿ ಪುಷ್ಪ ಪ್ರದರ್ಶನ
Published On :

ಬೆಂಗಳೂರು: ಉದ್ಯಾನನಗರಿಯ ಸಸ್ಯಕಾಶಿ ಲಾಲ್ ಬಾಗ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವಕ್ಕೆ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ ಮುಖ್ಯ ಆಕರ್ಷಣೆ. 

ಕೋವಿಡ್-19 ಹಿನ್ನೆಲೆಯಲ್ಲಿ ಕಳೆದೆರಡು ವರ್ಷಗಳ ಕಾಲ ರದ್ದಾಗಿದ್ದ ಫಲಪುಷ್ಪ ಪ್ರದರ್ಶನ ಈ ವರ್ಷ ಮತ್ತೆ ಆರಂಭವಾಗಿದೆ. ಇಂದು ಲಾಲ್ ಬಾಗ್ ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿದರು. ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರ ಹೆಸರಿನಲ್ಲಿ ಈ ಬಾರಿ ಪುಷ್ಪ ಪ್ರದರ್ಶನ ನಡೆಯುತ್ತಿರುವುದು ವಿಶೇಷ. 

ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಗೌರವವನ್ನು ನವೆಂಬರ್ 1 ಕನ್ನಡ ರಾಜ್ಯೋತ್ಸವದಂದು ನೀಡಲಾಗುವುದು ಎಂದು ಪ್ರಕಟಿಸಿದರು.

ನವೆಂಬರ್ 1ರಂದು ಕರ್ನಾಟಕ ರತ್ನ ನೀಡಲು ತಯಾರಿ ಮಾಡಲಿದ್ದು, ಇದಕ್ಕಾಗಿ ಸಣ್ಣ ಸಮಿತಿ ರಚನೆ ಮಾಡಿದ್ದೇವೆ. ಆ ದಿನ ರಾಜ್ ಕುಮಾರ್ ಕುಟುಂಬ ಉಪಸ್ಥಿತವಿರುತ್ತದೆ ಎಂದರು. 

ಪುಷ್ಪ ಪ್ರದರ್ಶನ: ಇಂದಿನಿಂದ ಆಗಸ್ಟ್ 15ವರೆಗೆ ಪುಷ್ಪ ಪ್ರದರ್ಶನ ನಡೆಯಲಿದ್ದು, ಪುನೀತ್ ರಾಜ್ ಕುಮಾರ್ ಪರಿಕಲ್ಪನೆಯಲ್ಲಿ ವಿನ್ಯಾಸ ಮಾಡಲಾಗಿದ್ದು, 2.5 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಸಾಮಾನ್ಯ ದಿನಗಳಲ್ಲಿ ಟಿಕೆಟ್ ದರ 70 ರೂಪಾಯಿಗಳಿದ್ದರೆ, ವಾರಂತ್ಯದಲ್ಲಿ 75 ರೂಪಾಯಿಗಳನ್ನು ನಿಗದಿಪಡಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆ ಸಚಿವ ಮುನಿರತ್ನ ಹೇಳಿದ್ದಾರೆ. 

ಸಮವಸ್ತ್ರ ಧರಿಸಿ ಬರುವ ಶಾಲಾ ಮಕ್ಕಳಿಗೆ ಈ ಪ್ರದರ್ಶನ ಉಚಿತವಾಗಿರಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.