ರಾಜ್ಯ

ಮುಂದಿನ ವರ್ಷ ವಿಶೇಷ ‘ಯುವ ಬಜೆಟ್’: ಸಿಎಂ ಬೊಮ್ಮಾಯಿ

ಯುವಜನರನ್ನು ಸಬಲೀಕರಣಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಮುಂದಿನ ವರ್ಷ ವಿಶೇಷ ‘ಯುವ ಬಜೆಟ್’ ಮಂಡಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಘೋಷಿಸಿದ್ದಾರೆ.

ಮುಂದಿನ ವರ್ಷ ವಿಶೇಷ ‘ಯುವ ಬಜೆಟ್’: ಸಿಎಂ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ
Published On :

ಬೆಂಗಳೂರು: ಯುವಜನರನ್ನು ಸಬಲೀಕರಣಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಮುಂದಿನ ವರ್ಷ ವಿಶೇಷ ‘ಯುವ ಬಜೆಟ್’ ಮಂಡಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಘೋಷಿಸಿದ್ದಾರೆ.

ಬಾಲಸುಬ್ರಮಣ್ಯಂ ನೇತೃತ್ವದ ತಜ್ಞರ ಸಮಿತಿ ಕರಡು ಕರ್ನಾಟಕ ಯುವ ನೀತಿ - 2022 (ಕೆವೈಪಿ)ಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು. ಕರಡು ಸ್ವೀಕರಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಸಂಪುಟದ ಅನುಮೋದನೆಯ ನಂತರ ಈ ಶಿಫಾರಸುಗಳನ್ನು ಜಾರಿಗೊಳಿಸಲಾಗುವುದು ಎಂದು ಭರವಸೆ ನೀಡಿದರು.

ದೇಶದ ಜನಸಂಖ್ಯೆಯಲ್ಲಿ ಶೇ. 46 ರಷ್ಟು ಯುವಕರಿದ್ದಾರೆ. ಇವರನ್ನು ದೇಶ ಕಟ್ಟುವ ಕೆಲಸದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕಾಗಿದೆ. ಆರ್ಥಿಕ ಅಭಿವೃದ್ಧಿಯ ಮೂಲಕ ಯುವ ಸಬಲೀಕರಣವಾಗಬೇಕಾಗಿದೆ. ಜೊತೆಗೆ ಉತ್ತಮ ವ್ಯಕ್ತಿತ್ವ ನಿರ್ಮಾಣವೂ ಆಗಬೇಕಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಆಯವ್ಯಯದಲ್ಲಿ ಯುವ ಬಜೆಟ್​ ರೂಪಿಸಲಾಗುವುದು ಎಂದು ಸಿಎಂ ಹೇಳಿದರು.

ಇದೇ ವೇಳೆ ಸ್ವಾಮಿ ವಿವೇಕಾನಂದ ಯುವ ಶಕ್ತಿ ಯೋಜನೆ ಅಡಿಯಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಲು ಸಹಾಯ ಮಾಡುವ ನಿಟ್ಟಿನಲ್ಲಿ ಯುವಕರ ಸ್ವಸಹಾಯ ಸಂಘಗಳಿಗೆ ಸಾಲ ವಿತರಿಸಲು ಎಸ್‌ಬಿಐ-ಆಂಕರ್ ಬ್ಯಾಂಕ್‌ನೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.