ರಾಜ್ಯ

ಕರಾವಳಿಯಲ್ಲಿ ನಿರ್ಬಂಧ ಸಡಿಲಿಕೆ: ನೈಟ್ ಕರ್ಫ್ಯೂ ತೆರವು, ಸೆಕ್ಷನ್ 144 ಮುಂದುವರಿಕೆ: ಡಿಸಿ ಕೆ.ವಿ. ರಾಜೇಂದ್ರ

ಕರಾವಳಿಯಲ್ಲಿ ನಡೆದಿದ್ದ ಅಹಿತಕರ ಘಟನೆಗಳು ಮತ್ತು ಸರಣಿ ಹತ್ಯೆಗಳ ಬಳಿಕ ಹೇರಲಾಗಿದ್ದ ನಿರ್ಬಂಧಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಕೆವಿ ರಾಜೇಂದ್ರ ಅವರು ಸಡಿಲಿಸಿದ್ದಾರೆ.

ಕರಾವಳಿಯಲ್ಲಿ ನಿರ್ಬಂಧ ಸಡಿಲಿಕೆ: ನೈಟ್ ಕರ್ಫ್ಯೂ ತೆರವು, ಸೆಕ್ಷನ್ 144 ಮುಂದುವರಿಕೆ: ಡಿಸಿ ಕೆ.ವಿ. ರಾಜೇಂದ್ರ
ಸಂಗ್ರಹ ಚಿತ್ರ
Published On :

ಮಂಗಳೂರು: ಕರಾವಳಿಯಲ್ಲಿ ನಡೆದಿದ್ದ ಅಹಿತಕರ ಘಟನೆಗಳು ಮತ್ತು ಸರಣಿ ಹತ್ಯೆಗಳ ಬಳಿಕ ಹೇರಲಾಗಿದ್ದ ನಿರ್ಬಂಧಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಕೆವಿ ರಾಜೇಂದ್ರ ಅವರು ಸಡಿಲಿಸಿದ್ದಾರೆ.

ಹೌದು.. ಪ್ರವೀಣ್ ನೆಟ್ಟಾರು ಮತ್ತು ಸುರತ್ಕಲ್ ಫಾಸಿಲ್ ಹತ್ಯೆ ಬಳಿಕ ದಕ್ಷಿಣ ಕನ್ನಡದಲ್ಲಿ ಉಲ್ಬಣಗೊಂಡಿದ್ದ ಉದ್ವಿಗ್ನತೆ ಶಮನಕ್ಕೆ ಹೇರಲಾಗಿದ್ದ ನಿರ್ಬಂಧಗಳನ್ನು ಜಿಲ್ಲಾಧಿಕಾರಿ ಕೆವಿ ರಾಜೇಂದ್ರ ಅವರು ಭಾನುವಾರ ಸಡಿಲಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ನೈಟ್ ಕರ್ಫ್ಯೂ ತೆರವುಗೊಳಿಸಲಾಗಿದೆ. ನಾಳೆ ರಾತ್ರಿ ಅಂಗಡಿ ಮುಂಗಟ್ಟುಗಳಿಗೆ ನಿರ್ಬಂಧ ಇರುವುದಿಲ್ಲ. ವಾಹನ ಸಂಚಾರಕ್ಕೂ ಯಾವುದೇ ನಿರ್ಬಂಧ ಇರುವುದಿಲ್ಲ. ಜಿಲ್ಲಾಡಳಿತ ಜಿಲ್ಲೆಯಾದ್ಯಂತ ನೈಟ್ ಕರ್ಫ್ಯೂ ಹಿಂಪಡೆದುಕೊಂಡಿದೆ. ಇನ್ನು ನೈಟ್ ಕರ್ಫ್ಯೂ ಹಿಂಪಡೆದುಕೊಂಡಿದ್ದರೂ ಜಿಲ್ಲಾದ್ಯಂತ ನಿಷೇಧಾಜ್ಞೆ ಮುಂದುವರೆಸಲಾಗಿದೆ. ಆಗಸ್ಟ್ 8 ರಿಂದ 14ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ವಿಸ್ತರಿಸಲಾಗಿದೆ.

ಜಿಲ್ಲೆಯಲ್ಲಿ ನಡೆದಿದ್ದ ಸರಣಿ ಕೊಲೆಗಳ ಹಿನ್ನೆಲೆಯಲ್ಲಿ ನಿರ್ಬಂಧಗಳನ್ನು ಹೇರಲಾಗಿತ್ತು. ಜಿಲ್ಲೆಯಲ್ಲಿ ಸಿಆರ್ ಪಿಸಿ 144 ಸೆಕ್ಷನ್ ಜಾರಿ ಮಾಡಲಾಗಿತ್ತು. ಮದ್ಯದಂಗಡಿಗಳ ಬಂದ್ ಮಾಡಲಾಗಿತ್ತು. ಇದೀಗ ಶಾಂತಿ ಮರಳಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಕೆವಿ ರಾಜೇಂದ್ರ ಅವರು, ನಿರ್ಬಂಧಗಳನ್ನು ತೆರವುಗೊಳಿಸಿದ್ದಾರೆ. ಮದ್ಯದಂಗಡಿಗಳು ಸೇರಿದಂತೆ ಎಲ್ಲ ಅಂಗಡಿಗಳು ಎಂದಿನಂತೆ ಕಾರ್ಯ ನಿರ್ವಹಿಸಲು ಅನುವು ಮಾಡಿಕೊಡಲಾಗಿದೆ. 

ಆದರೆ ಮುಂಜಾಗ್ರತಾ ಕ್ರಮವಾಗಿ 144 ಸೆಕ್ಷನ್ ಮುಂದುವರೆಯಲಿದ್ದು, ಆಗಸ್ಟ್ 14 ರ ಮಧ್ಯರಾತ್ರಿಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಐದು ಜನಕ್ಕಿಂತ ಹೆಚ್ಚಿನ ಮಂದಿ ಒಂದು ಕಡೆ ಸೇರುವಂತಿಲ್ಲ ಎಂದು ರಾಜೇಂದ್ರ ಹೇಳಿದ್ದಾರೆ.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.